ವಿಶ್ವ ಆ್ಯತ್ಲೆಟಿಕ್ಸ್ ಚಾಂಪಿಯನ್ಶಿಪ್ನಲ್ಲಿ ಚಿನ್ನ ಮುಡಿಗೇರಿಸಿ ಐತಿಹಾಸಿಕ ಸಾಧನೆ ಮಾಡಿದ ನೀರಜ್ ಚೋಪ್ರಾ
ಭಾರತದ ಜಾವೆಲಿನ್ ತಾರೆ ನೀರಜ್ ಚೋಪ್ರಾ ಅವರು ವಿಶ್ವ ಆ್ಯತ್ಲೆಟಿಕ್ಸ್ ಚಾಂಪಿಯನ್ಶಿಪ್ನಲ್ಲಿ ಚಿನ್ನ ಮುಡಿಗೇರಿಸಿ ಐತಿಹಾಸಿಕ ಸಾಧನೆ ಮಾಡಿದ್ದಾರೆ.
ಇದು ವಿಶ್ವ ಆ್ಯತ್ಲೆಟಿಕ್ಸ್ನಲ್ಲಿ ಭಾರತ ಜಯಿಸಿರುವ ಪ್ರಪ್ರಥಮ ಚಿನ್ನವಾಗಿದೆ.
ರವಿವಾರ ರಾತ್ರಿ ನಡೆದ ಫೈನಲ್ನಲ್ಲಿ ನೀರಜ್ ಚೋಪ್ರಾ 88.17 ಮೀ. ದೂರಕ್ಕೆ ಜಾವೆಲಿನ್ ಎಸೆಯುವ ಮೂಲಕ ಚಿನ್ನದ ಪದಕಕ್ಕೆ ಮುತ್ತಿಟ್ಟರು. ಪಾಕಿಸ್ಥಾನದ ಅರ್ಷದ್ ನದೀಮ್ 87.82 ಮೀ. ದೂರಕ್ಕೆ ಎಸೆದು ದ್ವಿತೀಯ ಸ್ಥಾನಿಯಾದರು.