ರಾಜಕೀಯರಾಷ್ಟ್ರೀಯ

ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ದೇಶ ನಿರಂಕುಶ ಅಧಿಕಾರದತ್ತ- ಮಮತಾ ಬ್ಯಾನರ್ಜಿಸತತ ಮೂರನೇ ಬಾರಿ ಕೇಂದ್ರದಲ್ಲಿ ಭಾರತೀಯ ಜನತಾ ಪಕ್ಷವು ಅಧಿಕಾರಕ್ಕೆ ಬಂದದ್ದೇ ಆದಲ್ಲಿ ದೇಶವು ನಿರಂಕುಶ ಅಧಿಕಾರವನ್ನು ಎದುರಿಸಬೇಕಾಗುತ್ತದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಟಿಎಂಸಿ ಯುವ ಘಟಕದ ರ್ಯಾಲಿಯಲ್ಲಿ ಮಾತನಾಡಿದ ಅವರು, ಒಂದು ವೇಳೆ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ದೇಶದಲ್ಲಿ ನಿರಂಕುಶಾಧಿಕಾರ ಬರಲಿದೆ. ಬಿಜೆಪಿ ಸಮುದಾಯಗಳ ನಡುವೆ ವೈಷಮ್ಯ ಉಂಟು ಮಾಡುವ ಕೆಲಸ ಮಾಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ದೇಶವನ್ನು ದ್ವೇಷದಿಂದ ತುಂಬಿಸುತ್ತಾರೆ ಎಂದ ಅವರು ಮುಂದಿನ ಲೋಕಸಭೆ ಚುನಾವಣೆಯನ್ನು ಬಿಜೆಪಿಯು ಡಿಸೆಂಬರ್ ಅಥವಾ ಮುಂದಿನ ಜನವರಿ ತಿಂಗಳಲ್ಲಿ ನಡೆಸಬಹುದು ಎಂಬ ಆತಂಕವಿದೆ ಎಂದರು.

Leave a Reply

Your email address will not be published. Required fields are marked *

error: Content is protected !!