ರಾಷ್ಟ್ರೀಯ

ಗೃಹ ಬಳಕೆಯ ಎಲ್.ಪಿ.ಜಿ ಸಿಲಿಂಡರ್‌ ಬೆಲೆ 200 ರೂ ಇಳಿಕೆ



ಅಡುಗೆ ಅನಿಲದ ಪ್ರತಿ ಸಿಲಿಂಡರ್‌ಗೆ ₹200 ಬೆಲೆಯನ್ನು ಕಡಿತಗೊಳಿಸಲಾಗಿದೆ ಎಂದು ವರದಿಯಾಗಿದೆ. ಮಂಗಳವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಕೇಂದ್ರ ಸರ್ಕಾರವು ಎಲ್ಲಾ ಗೃಹಬಳಕೆಯ ಗ್ರಾಹಕರಿಗೆ ಎಲ್‌ಪಿಜಿ ಸಬ್ಸಿಡಿ ನೀಡಲು ನಿರ್ಧರಿಸಿದೆ.

ಸಾಂದರ್ಭಿಕ ಚಿತ್ರ

ಉಜ್ವಲ ಯೋಜನೆಯಡಿ 200 ರೂ.ಗಳ ಹೆಚ್ಚುವರಿ ಸಬ್ಸಿಡಿ ನೀಡಲು ಸಂಪುಟ ಅನುಮೋದನೆ ನೀಡಿದ್ದು, ಇನ್ನು ಮುಂದೆ, ಪ್ರಧಾನ ಮಂತ್ರಿ ಉಜ್ವಲ ಯೋಜನೆ ಫಲಾನುಭವಿಗಳಿಗೆ ಪ್ರತಿ ಸಿಲಿಂಡರ್‌ಗೆ ಒಟ್ಟು ರೂ.400 ಸಬ್ಸಿಡಿ ಇರಲಿದೆ.

“ಪ್ರಧಾನಿ ನರೇಂದ್ರ ಮೋದಿ ಅವರು ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ₹ 200 ಕಡಿತವನ್ನು ನಿರ್ಧರಿಸಿದ್ದಾರೆ. ಇದು ರಕ್ಷಾ ಬಂಧನ ಮತ್ತು ಓಣಂ ಸಂದರ್ಭದಲ್ಲಿ ದೇಶದ ಮಹಿಳೆಯರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ನೀಡುತ್ತಿರುವ ಉಡುಗೊರೆ” ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!