13,500 ಶಿಕ್ಷಕರಿಗೆ ಶೀಘ್ರ ನೇಮಕಾತಿ ಪತ್ರ: ಮಧು ಬಂಗಾರಪ್ಪ
ರಾಜ್ಯದಲ್ಲಿ 40,000 ಶಿಕ್ಷಕರ ಕೊರತೆಯಿದ್ದು ವಾರದಲ್ಲಿ ಹೊರಬೀಳುವ ಹೈಕೋರ್ಟು ತೀರ್ಮಾನಕ್ಕನುಗುಣವಾಗಿ 13,500 ಶಿಕ್ಷಕರಿಗೆ ಶೀಘ್ರ ನೇಮಕಾತಿ ಪತ್ರ ನೀಡಲಾಗುವುದು ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಬ್ರಹ್ಮಗಿರಿಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಭವನಕ್ಕೆ ಆ . 29ರಂದು ಭೇಟಿ ನೀಡಿದ ವೇಳೆ ಮಾತನಾಡಿದ ಅವರು, ರಾಜ್ಯದಲ್ಲಿ 32,000 ಶಿಕ್ಷಕರಿಗೆ ಕೋರಿಕೆ ವರ್ಗಾವಣೆ ನೀಡಿದ್ದು ಕಲ್ಯಾಣ ಕರ್ನಾಟಕದಲ್ಲಿ ಶಿಕ್ಷಕರ ಕೊರತೆ ನೀಗಲು 10,000 ಅತಿಥಿ ಶಿಕ್ಷಕರನ್ನು ನಿಯೋಜಿಸಲಾಗಿದೆ. ಅನ್ಯ ಪ್ರದೇಶದ ಶಾಲೆಗಳಲ್ಲಿರುವ ಶಿಕ್ಷಕರ ಕೊರತೆ ನೀಗಲು ಅತಿಥಿ ಶಿಕ್ಷಕರಿಗೆ ಅವಕಾಶ ಕಲ್ಪಿಸಲಾಗುವುದು ಎಂದರು.