ಗೃಹಲಕ್ಷ್ಮೀ ಯೋಜನೆಗೆ ಇಂದು ಮೈಸೂರಿನಲ್ಲಿ ಚಾಲನೆ
ಕಾಂಗ್ರೆಸ್ ಸರಕಾರದ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಆ.30ರಂದು ಚಾಲನೆ ಸಿಗಲಿದೆ. ಈಗಾಗಲೆ ನೋಂದಾಯಿಸಿಕೊಂಡ 1.9 ಕೋಟಿ ಮಹಿಳೆಯರ ಖಾತೆಗಳಿಗೆ ಏಕಕಾಲಕ್ಕೆ 2 ಸಾವಿರ ರೂ. ಹಣ ವರ್ಗಾವಣೆಯಾಗಲಿದೆ.
ಮೈಸೂರು ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯಲಿದ್ದು ಒಂದು ಲಕ್ಷಕ್ಕೂ ಅಧಿಕ ಸಂಖ್ಯೆಯ ಜನರು ಸೇರುವ ಸಾಧ್ಯತೆ ಇದೆ. ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಹಿತ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.