ಕಾಡಾನೆ ದಾಳಿಗೆ ಶಾರ್ಪ್ ಶೂಟರ್ ವೆಂಕಟೇಶ್ ಬಲಿ
ಗಾಯಗೊಂಡಿದ್ದ ಆನೆಗೆ ಚಿಕಿತ್ಸೆ ನೀಡಲು ಮುಂದಾಗಿದ್ದ ಅರಣ್ಯ ಸಿಬ್ಬಂದಿ ಮೇಲೆಯೇ ಆನೆ ದಾಳಿ ಮಾಡಿದ್ದು, ಅರವಳಿಕೆ ತಜ್ಞ ಸ್ಥಳದಲ್ಲಿಯೇ ಸಾವನ್ನಪ್ಪಿರುವ ದುರ್ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.

ಈವರೆಗೆ ಯಾರ ಮೇಲೂ ದಾಳಿ ಮಾಡದ ಭೀಮ ಎಂಬ ಆನೆ ಈಗ ಗಾಯಗೊಂಡ ಹಿನ್ನೆಲೆಯಲ್ಲಿ ಚಿಕಿತ್ಸೆ ನೀಡಲು ಹೋದಾಗ ದಾಳಿ ಮಾಡಿದೆ.
ಗಾಯಗೊಂಡ ಕಾಡಾನೆಗೆ ಚಿಕಿತ್ಸೆ ನೀಡಲು ಹೋಗಿದ್ದ ವೇಳೆ ಅರಣ್ಯ ಸಿಬ್ಬಂದಿ ಮೇಲೆಯೇ ಆನೆ ದಾಳಿ ಮಾಡಿದ್ದು, ಯಡವಟ್ಟು ಸಂಭವಿಸಿದೆ. ಅರವಳಿಕೆ ಮದ್ದು ನೀಡಲು ತೆರಳಿದ್ದ ಅರಣ್ಯ ಸಿಬ್ಬಂದಿ ಮೇಲೆ ಅಟ್ಯಾಕ್ ಮಾಡಿದೆ. ಗಾಯಗೊಂಡಿದ್ದ ಭೀಮ ಆನೆಯಿಂದಲೇ ಅಟ್ಯಾಕ್ ಮಾಡಲಾಗಿದೆ. ಗಂಭೀರವಾಗಿ ಗಾಯಗೊಂಡ ಅರಣ್ಯ ಸಿಬ್ಬಂದಿ ವೆಂಕಟೇಶ್ ಗಂಭೀರ ಗಾಯಗೊಂಡಿದ್ದರು. ಇನ್ನು ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಇವರು ಆಲೂಕಿನ ತಾಲೂಕಿನ ಹೊನ್ನವಳ್ಳಿ ಗ್ರಾಮದವರಾಗಿದ್ದಾರೆ.