ಜೆಡಿಎಸ್’ಗೆ ಬಿಗ್ ಶಾಕ್: ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅನರ್ಹಗೊಳಿಸಿ ಹೈಕೋರ್ಟ್ ಆದೇಶ
ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ. ಎ ಮಂಜು, ದೇವರಾಜೇಗೌಡ ಅವರು ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿ ಸಂಬಂಧ ವಿಚಾರಣೆ ನಡೆಸಿದ ಕೋರ್ಟ್ ಈ ಆದೇಶ ಹೊರಡಿಸಿದೆ.
ಎ ಮಂಜು, ದೇವರಾಜೇಗೌಡ ಅವರು ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿ ಸಂಬಂಧ ವಿಚಾರಣೆ ನಡೆಸಿದ ಕೋರ್ಟ್ ಈ ಆದೇಶ ಹೊರಡಿಸಿದೆ. ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಅಫಿಡವಿಟ್ ನಲ್ಲಿ ಘೋಷಿಸಿದ ಆಸ್ತಿ ವಿವರಗಳ ಕುರಿತು ಅಕ್ಷೇಪ ವ್ಯಕ್ತಪಡಿಸಿ ವಕೀಲ ದೇವರಾಜೇಗೌಡ, ಪ್ರಜ್ವಲ್ ರೇವಣ್ಣ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಪ್ರಜ್ವಲ್ ರೇವಣ್ಣ ಅವರ ಸಂಸದ ಸ್ಥಾನವನ್ನು ಅನರ್ಹಗೊಳಿಸಿ ಆದೇಶಿಸಿದೆ.