ಆಪರೇಷನ್ ಹಸ್ತಕ್ಕೆ ಯಾರೂ ಬಲಿಯಾಗಬೇಡಿ: ಯತ್ನಾಳ್
ಬಿಜೆಪಿ ಪಕ್ಷದ ಯಾವುದೇ ಶಾಸಕರು ದುಡುಕಿನ ನಿರ್ಧಾರ ಕೈಗೊಂಡು ಆಪರೇಷನ್ ಹಸ್ತಕ್ಕೆ ಬಲಿಯಾಗಬೇಡಿ. ರಾಹುಲ್ ಗಾಂಧಿ, ಸಿದ್ಧರಾಮಯ್ಯ, ಡಿಕೆ ಶಿವಕುಮಾರ ಕರೆದಿದ್ದಾರೆ ಎಂದು ಕಾಂಗ್ರೆಸ್ ಸೇರಿದರೆ ಭವಿಷ್ಯದಲ್ಲಿ ನೀವೆಂದೂ ಶಾಸಕರಾಗಲು ಸಾಧ್ಯವಿಲ್ಲ. ಅಲ್ಲದೇ ನಿಮ್ಮ ರಾಜಕೀಯ ಭವಿಷ್ಯವೇ ನಾಶವಾಗಲಿದೆ ಎಂದು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಎಚ್ಚರಿಸಿದರು.

ವಿಜಯಪುರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಬಹಳಷ್ಟು ಶಾಸಕರು ಅಸಮಾಧಾನಗೊಂಡಿದ್ದಾರೆ ಎಂದೂ ಇದೇ ಸಂದರ್ಭದಲ್ಲಿ ಹೇಳಿದರು.