ಸೌಜನ್ಯಾ ಪ್ರಕರಣ:ಇಂದು ಬೆಳ್ತಂಗಡಿಯಲ್ಲಿ ಬೃಹತ್ ಪ್ರತಿಭಟನೆ: ವಾಹನ ಸಂಚಾರದಲ್ಲಿ ಬದಲಾವಣೆ
ಸೌಜನ್ಯಾ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆ.3ರಂದು ಮಹೇಶ್ ಶೆಟ್ಟಿ ತಿಮರೋಡಿ ನೇತೃತ್ವದಲ್ಲಿ ಬೆಳ್ತಂಗಡಿಯಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಯಲಿರುವ ಹಿನ್ನೆಲೆಯಲ್ಲಿ ಬೆಳ್ತಂಗಡಿ ಪೇಟೆಯಲ್ಲಿ ಅತ್ಯಧಿಕ ಜನ ಸಂದಣಿಯಾಗಿ ರಸ್ತೆ ಸಂಚಾರಕ್ಕೆ ಅಡಚಣೆಯಾಗುವ ಸಾಧ್ಯತೆ ಇರುವುದರಿಂದ ರಾಷ್ಟ್ರೀಯ ಹೆದ್ದಾರಿ 73ರ ಮಾರ್ಗ ಬದಲಾವಣೆಮಾಡಲಾಗಿದೆ.
ಬೆಳ್ತಂಗಡಿ ಪೇಟೆ ಮೂಲಕ ಹೋಗುವ ಕಡೂರು-ಬಂಟ್ವಾಳ ಹೆದ್ದಾರಿಯಲ್ಲಿ ಸಂಚರಿಸುವ ಎಲ್ಲ ವಾಹನಗಳನ್ನು ಬೆಳಗ್ಗೆ 9ರಿಂದ ಸಂಜೆ 5ರವರೆಗೆ ಕೊಯ್ಯೂರು ಕ್ರಾಸ್ ರಸ್ತೆಯ ಮೂಲಕ ಆದ್ರುಪೆರಾಲ್ ಮುಖಾಂತರ ಪರಪ್ಪು ಗೇರುಕಟ್ಟೆಯಾಗಿ ಮಂಗಳೂರು ಕಡೆಗೆ ಸಂಚರಿಸಲು ಹಾಗೆಯೇ ಮಂಗಳೂರಿನಿಂದ ಉಜಿರೆ ಕಡೆಗೆ ಬರುವ ಎಲ್ಲ ವಾಹನಗಳನ್ನು ಗುರುವಾಯನಕೆರೆಯಲ್ಲಿ, ಉಪ್ಪಿನಂಗಡಿ ರಸ್ತೆ ಮೂಲಕ ಪರಪ್ಪು ಕ್ರಾಸ್‌ನಲ್ಲಿ ಆದ್ರುಪೆರಾಲ್ ಮುಖಾಂತರ ಸಂಚರಿಸಲು ಮತ್ತು ಉಳಿದ ಸಣ್ಣ ವಾಹನಗಳನ್ನು ಚರ್ಚ್ ಕ್ರಾಸ್‌ನಿಂದ ಕನ್ನಾಜೆ, ಪಡ್ಲಾಡಿ, ಲಾೖಲ ಮಾರ್ಗವಾಗಿ ಉಜಿರೆ ಕಡೆ ಸಂಚರಿಸುವಂತೆ ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.