ಮಂಗಳೂರು: ಯುವಕನಿಗೆ ಚೂರಿ ಇರಿದ ಪ್ರಕರಣ- ಮೂವರ ಬಂಧನ
ಮಂಗಳೂರು: ಸುರತ್ಕಲ್ ಠಾಣಾ ವ್ಯಾಪ್ತಿಯ ಕಳವಾರು ಎಂಬಲ್ಲಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಯುವಕನಿಗೆ ತಂಡವೊಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಶಾಂತಿಗುಡ್ಡೆ ನಿವಾಸಿ ಅಬ್ದುಲ್ ಸಫ್ವಾನ್ (23.ವ) ಹಲ್ಲೆಗೊಳಗಾದ ಯುವಕ
ಬಂಧಿತ ಆರೋಪಿಗಳನ್ನು ಪ್ರಶಾಂತ್ (28. ವ), ಧನರಾಜ್ (23. ವ), ಯಾಜ್ಞೆಶ್ (22. ವ) ಎಂದು ಗುರುತಿಸಲಾಗಿದೆ.
ರವಿವಾರ ರಾತ್ರಿ ಅಬ್ದುಲ್ ಸಫ್ವಾನ್ ಬಜಪೆಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಗುಂಪೊಂದು ಅವರ ಮೇಲೆ ದಾಳಿ ಮಾಡಿದ್ದು, ಅಬ್ದುಲ್ ಸಫ್ವಾನ್ ಅವರ ಕೈ ಮತ್ತು ಕುತ್ತಿಗೆಗೆ ಚುಚ್ಚಿದ ಗಾಯಗಳಾಗಿವೆ. ಅವರನ್ನು ತಕ್ಷಣ ಬಜಪೆಯ ಖಾಸಗಿ ಆಸ್ಪತ್ರೆಗೆ ಸಾಗಿಸಿ ಬಳಿಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.