ಕಾಡಾನೆ ದಾಳಿಗೆ ಅರಣ್ಯ ಇಲಾಖೆ ಸಿಬ್ಬಂದಿ ಬಲಿ
ಕಾಡಾನೆ ದಾಳಿಗೆ ಅರಣ್ಯ ಇಲಾಖೆಯ ಕಾರ್ಯಪಡೆಯ ಸಿಬ್ಬಂದಿ ಬಲಿಯಾಗಿದ್ದಾರೆ. ಇಬ್ಬರ ಮೇಲೆ ದಾಳಿ ಮಾಡಿದ ಕಾಡಾನೆಯನ್ನು ಕಾಡಿಗಟ್ಟುವ ಕಾರ್ಯಾಚರಣೆ ವೇಳೆ ಅರಣ್ಯ ಇಲಾಖೆ ಸಿಬ್ಬಂದಿಯೇ ಬಲಿಯಾದ ದಾರುಣ ಘಟನೆ ಮಡಿಕೇರಿ ಸುಂಟಿಕೊಪ್ಪ ಸಮೀಪದ ಕೆದಕಲ್ ಗ್ರಾಮದಲ್ಲಿ ವದರಿಯಾಗಿದೆ.
ಅರಣ್ಯ ಇಲಾಖೆಯ ಆನೆ ಕಾರ್ಯಪಡೆಯ ಸಿಬ್ಬಂದಿ ಗಿರೀಶ್ (35ವ) ಮೃತಪಟ್ಟವರು.
ಸುಂಟಿಕೊಪ್ಪ ಕೆದಕಲ್ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಒಂಟಿ ಸಲಗವನ್ನು ಮೀನುಕೊಲ್ಲಿ ಮೀಸಲು ಅರಣ್ಯಕ್ಕೆ ಓಡಿಸಲು 20 ಮಂದಿಯ ಆರ್.ಆರ್.ಟಿ ತಂಡ ಕಾರ್ಯಾಚರಣೆಗೆ ಇಳಿದಿತ್ತು. ಈ ಸಂದರ್ಭ ಸಿಬ್ಬಂದಿಗಳನ್ನೇ ಅಟ್ಟಾಡಿಸಿಕೊಂಡು ಬಂದ ಕಾಡಾನೆ ಏಕಾಏಕಿ ಗಿರೀಶ್ ಅವರ ಮೇಲೆ ದಾಳಿ ಮಾಡಿ ತುಳಿದು ಹಾಕಿದೆ.