ಮಂಗಳೂರು: ನೂತನ ಪೊಲೀಸ್ ಆಯುಕ್ತರಾಗಿ ಅನುಪಮ್ ಅಗರ್ವಾಲ್ ನೇಮಕ
ಮಂಗಳೂರು: ರಾಜ್ಯ ಸರ್ಕಾರ ಹಾಲಿ ಮಂಗಳೂರು ಪೊಲೀಸ್ ಕಮೀಷನರ್ ಆಗಿರುವ ಕುಲದೀಪ್ ಕುಮಾರ್ ಆರ್ ಜೈನ್ ಅವರು ಸೇರಿದಂತೆ 35 ಐಪಿಎಸ್ ಅಧಿಕಾರಿಗಳನ್ನು ಬೆಳ್ಳಂಬೆಳಗ್ಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ನಗರದ ನೂತನ ಪೊಲೀಸ್ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಅನುಪಮ್ ಅಗರ್ವಾಲ್ ಅವರನ್ನು ನೇಮಕ ಮಾಡಲಾಗಿದೆ
ನೂತನ ಆಯುಕ್ತರಾಗಿರುವ ಅನುಪಮ್ ಅಗರ್ವಾಲ್ 2008-ಬ್ಯಾಚ್ IPS ಅಧಿಕಾರಿಯಾಗಿದ್ದು ಮೂಲತಃ ರಾಜಸ್ಥಾನದ ಜೋಧ್‌ಪುರದವರು. ಈ ಹಿಂದೆ ಕರ್ನಾಟಕ ಪೊಲೀಸ್ ಅಕಾಡೆಮಿಯ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು.