ಏಕದಿನ ವಿಶ್ವಕಪ್ ಗೆ ಟೀಮ್ ಇಂಡಿಯಾ ಪ್ರಕಟ
ತವರಿನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಕೂಟಕ್ಕೆ ಭಾರತ ತಂಡವನ್ನು ಅಂತಿಮಗೊಳಿಸಲಾಗಿದೆ. 15 ಜನರ ತಂಡವನ್ನು ಆಯ್ಕೆ ಮಾಡಿದ್ದು, ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಲಿದ್ದಾರೆ. ಅಕ್ಟೋಬರ್ 5ರಿಂದ ವಿಶ್ವ ಕಪ್ ಪಂದ್ಯಾಟ ನಡೆಯಲಿದೆ. ಕ್ರಿಕೆಟ್ ತಂಡದ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಅವರು ತಂಡದ ಆಯ್ಕೆ ಬಗ್ಗೆ ಪ್ರಕಟಿಸಿದರು.
ವಿಶ್ವಕಪ್ ಗೆ 15 ಜನರ ತಂಡ ಪ್ರಕಟಿಸಬೇಕಾದ ಕಾರಣ 17 ಜನರ ಏಷ್ಯಾ ಕಪ್ ತಂಡದಲ್ಲಿದ್ದ ಯುವ ಆಟಗಾರರಾದ ತಿಲಕ್ ವರ್ಮಾ ಮತ್ತು ಕನ್ನಡಿಗ ಪ್ರಸಿಧ್ ಕೃಷ್ಣ ಅವರನ್ನು ಕೈ ಬಿಡಲಾಗಿದೆ.
ಕನ್ನಡಿಗ ಕೆ.ಎಲ್ ರಾಹುಲ್ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯಲು ಯಶಸ್ವಿಯಾಗಿದ್ದಾರೆ. ವಿಕೆಟ್ ಕೀಪರ್ ಕೋಟಾದಲ್ಲಿ ಕೆಎಲ್ ರಾಹುಲ್ ಮತ್ತು ಎಡಗೈ ಆಟಗಾರ ಇಶಾನ್ ಕಿಶನ್ ಆಯ್ಕೆಯಾಗಿದ್ದಾರೆ. ಸಂಜು ಸ್ಯಾಮ್ಸನ್ ರನ್ನು ವಿಶ್ವಕಪ್ ನಿಂದ ಕೈಬಿಡಲಾಗಿದೆ.
ವಿಶ್ವಕಪ್ ಗೆ ಪ್ರಕಟಗೊಂಡ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.