ಜಿಲ್ಲೆ

ಹಕ್ಕುಪತ್ರ ನೀಡಲು ಅಧಿಕಾರಿಗಳ ವಿಳಂಬ ಆರೋಪ: ಗ್ರಾ.ಪಂ ಉಪಾಧ್ಯಕ್ಷನಿಂದ ಮೌನ ಪ್ರತಿಭಟನೆ



 ಎರಡು ವರ್ಷಗಳಿಂದ ಗ್ರಾಮದ 70ಕ್ಕೂ ಹೆಚ್ಚು ಗ್ರಾಮಸ್ಥರು 94 ಸಿ ಯಲ್ಲಿ ಅರ್ಜಿ ಸಲ್ಲಿಸಿದ್ದು ಅದರಲ್ಲಿ 30 ಜನರು ಸರ್ಕಾರಕ್ಕೆ ಹಣವನ್ನು ಪಾವತಿ ಮಾಡಿದ್ದಾರೆ ಆದರೆ ಮೂಡಿಗೆರೆ ತಸಿಲ್ದಾರ್ ಅವರು ಹಕ್ಕುಪತ್ರ ನೀಡಲು ಹಿಂದೇಟು ಹಾಕುತ್ತಿದ್ದಾರೆ ಎಂದು ಆರೋಪಿಸಿ ಮೂಡಿಗೆರೆ ತಾಲ್ಲೂಕಿನ ನಿಡುವಳೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ನವೀನ್ ಹಾವಳಿ ಮೂಡಿಗೆರೆ ಮಿನಿ ವಿಧಾನಸೌಧದ ಎದುರು ಏಕಾಂಗಿಯಾಗಿ ಮೌನ ಪ್ರತಿಭಟನೆ ಆರಂಭಿಸಿದ್ದಾರೆ.

ಗ್ರಾಮದಲ್ಲಿ ಕೂಲಿ ಕಾರ್ಮಿಕರೇ ಹೆಚ್ಚಾಗಿ ವಾಸ ಮಾಡುತ್ತಿದ್ದು 94 ಸಿ ಅರ್ಜಿ ಸಲ್ಲಿಸಿ ಎರಡು ವರ್ಷ ಕಳೆದರೂ ಹಕ್ಕುಪತ್ರ ನೀಡದೆ ಅಧಿಕಾರಿಗಳು ಮೀನಾ ಮೇಷ ಎಣಿಸುತ್ತಿದ್ದಾರೆ. ಗ್ರಾಮಸ್ಥರು ಕಚೇರಿಗಳಿಗೆ ಅಲೆದು ಅಲೆದು ರೋಸಿ ಹೋಗಿದ್ದಾರೆ. ಇದರಿಂದ ಖುದ್ದಾಗಿ ನಾನೇ ಬಂದರು ಮೂಡಿಗೆರೆ ತಾಲೂಕು ಕಚೇರಿಯಲ್ಲಿ ಯಾವುದೇ ಕೆಲಸ ಕಾರ್ಯಗಳು ನಡೆಯುತ್ತಿಲ್ಲ ಅದರಿಂದ ಬೇಸತ್ತು ಮೌನ ಪ್ರತಿಭಟನೆ ಮಾಡುತ್ತಿದ್ದೇನೆ ಎಂದು ನವೀನ್ ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!