ಡಿಕೆ ಶಿವಕುಮಾರ್ ಭೇಟಿಯಾದ ಶಿವರಾಮ್ ಹೆಬ್ಬಾರ್, ಎಲ್ಆರ್ ಶಿವರಾಮೇಗೌಡ; ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ ಭೇಟಿ
ಬೆಂಗಳೂರು: ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಹಾಗೂ ಮಂಡ್ಯದ ಮಾಜಿ ಸಂಸದ ಎಲ್ಆರ್ ಶಿವರಾಮೇಗೌಡ ಅವರು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ.
ಬೆಂಗಳೂರಿನ ಕುಮಾರಕೃಪಾದಲ್ಲಿ ಉಭಯ ನಾಯಕರು ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಈ ಭೇಟಿರಾಜಕೀಯವಲಯದಲ್ಲಿಸಂಚಲನಮೂಡಿಸಿದ್ದುಭಾರೀಚರ್ಚೆಗೆಕಾರಣವಾಗಿದೆ.
‘ಆಪರೇಷನ್ ಹಸ್ತ’ ದ ವದಂತಿ ಹಬ್ಬುತ್ತಿರುವ ಸಂದರ್ಭದಲ್ಲೇ ಉಭಯ ನಾಯಕರು ಉಪ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದರ ಹಿಂದಿನ ಉದ್ದೇಶವೇನು ಎನ್ನುವುದರ ಬಗ್ಗೆ ಚರ್ಚೆ ಶುರುವಾಗಿದೆ.
ಈ ಮಧ್ಯೆ, ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರ ನಿವಾಸಕ್ಕೆ ಡಿಕೆ ಶಿವಕುಮಾರ್ ಭೇಟಿ ನೀಡಿದ್ದು ಕೂಡ ಭಾರೀ ಚರ್ಚೆಗೆ ಕಾರಣವಾಗಿದೆ.
ಬಿಜೆಪಿಯ ಹಿರಿಯ ನಾಯಕ ಹಾಗೂ ಕೇಂದ್ರ ಸಚಿವ ಅನಂತ್ ಕುಮಾರ್ ಅವರ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಕೂಡ ಇತ್ತೀಚೆಗೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದರು. ಇದೂ ಕೂಡಾ ಭಾರೀ ಚರ್ಚೆಗೆ ಕಾರಣವಾಗಿದೆ.