ಜಿಲ್ಲೆ

ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ಗುದ್ದಿದ ಬಸ್: ಐವರು ವಿದ್ಯಾರ್ಥಿಗಳು ಗಂಭೀರ

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ರಸ್ತೆ ಬದಿಯಲ್ಲಿದ್ದ ಅಂಗಡಿಗೆ ಗುದ್ದಿದ ಪರಿಣಾಮ ಸ್ಥಳದಲ್ಲಿ ಬಸ್ ಗೆ ಕಾಯುತ್ತಿದ್ದ ಐವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ದುಗ್ಲಾಪುರ ಗ್ರಾಮದಲ್ಲಿ ನಡೆದಿದೆ.

ಬಸ್ ಅಪಘಾತದ ವೇಳೆ ಕೆಲವು ಮಕ್ಕಳು ಗಾಯಗೊಂಡಿದ್ದು, ಇಬ್ಬರು ವಿದ್ಯಾರ್ಥಿನಿಯರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಅವರನ್ನು ತುರ್ತು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!