ರಾಜ್ಯ

‘ಗೃಹಲಕ್ಷ್ಮೀ’ ನೋಂದಣಿ ಸ್ಥಗಿತ ಆಗಿಲ್ಲ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

‘ಗೃಹಲಕ್ಷ್ಮೀ’ ನೋಂದಣಿ ಸ್ಥಗಿತ ಆಗಿದೆ ಎಂದು ಕೇಳಿ ನನಗೆ ಆಶ್ಚರ್ಯವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ತಕ್ಷಣ ಇಲಾಖೆ ಕಾರ್ಯದರ್ಶಿ, ನಿರ್ದೇಶಕರನ್ನು ಕರೆದು ಮಾತನಾಡಿದ್ದೇನೆ, ಅತಾಚುರ್ಯದಿಂದ ನಮ್ಮ ಇಲಾಖೆಯಿಂದ ಈ ಟ್ವೀಟ್ ಆಗಿದೆ. ಏಕೆ ಆ ರೀತಿ ಆಯ್ತು ಗೊತ್ತಾಗುತ್ತಿಲ್ಲ. ಟ್ವೀಟ್ ಸಂಬಂಧ ಎಲ್ಲರಿಗೂ ನೋಟಿಸ್ ಜಾರಿ ಮಾಡಿದ್ದೇವೆ. ಈ ವಿಚಾರವನ್ನು ಬಹಳ ಸೀರಿಯಸ್ ಆಗಿ ತೆಗೆದುಕೊಂಡಿದ್ದೇವೆ. ಸಾಮಾಜಿಕ ಜಾಲತಾಣ ನಿರ್ವಹಿಸುವವರ ವಿರುದ್ಧ ಕ್ರಮ ಆಗುತ್ತದೆ ಎಂದು ಹೇಳಿದ್ದಾರೆ.

ಗೃಹಲಕ್ಷ್ಮೀ ನಿರಂತರವಾಗಿ ನಡೆಯುವ ಯೋಜನೆಯಾಗಿದ್ದು
ನಮ್ಮ ಇಲಾಖೆಯಿಂದ ಈಗಾಗಲೇ ಹಣ ವರ್ಗಾವಣೆ ಆಗಿದೆ. ಬ್ಯಾಂಕ್​ನಿಂದ ಮಾತ್ರ ಹಣ ನಿಧಾನ ಆಗಿದೆ. ಇನ್ನು ನಾಲ್ಕೈದು ದಿನಗಳಲ್ಲಿ ಎಲ್ಲರಿಗೂ ಹಣ ವರ್ಗಾವಣೆ ಆಗುತ್ತೆ. ನಿಧಾನವಾಗಿ ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಪ್ರಕ್ರಿಯೆ ಆಗುತ್ತಿದೆ. ಫಲಾನುಭವಿಗಳಿಗೆ ನಮ್ಮ ಇಲಾಖೆಯಿಂದ ಹಣ ಕಳುಹಿಸುತ್ತಿದ್ದೇವೆ. ಹೊಸದಾಗಿ ನೋಂದಣಿ ಮಾಡಿಕೊಂಡವರಿಗೂ ಲಾಭ ಸಿಗುತ್ತಿದೆ. ಗೃಹಲಕ್ಷ್ಮೀ ನಿರಂತರವಾಗಿ ನಡೆಯುವ ಯೋಜನೆ ಎಂದು ತಿಳಿಸಿದರು.

ನಿನ್ನೆ ರಾತ್ರಿ ತನಕ 1.8 ಕೋಟಿ ರೂ. ಅಕೌಂಟ್​​ಗೆ ಇಲ್ಲಿಯವರೆಗೆ ಹಣ ಡಿಬಿಟಿ ಪ್ರೊಸೆಸ್ ಆಗಿದೆ. ಅದರಲ್ಲಿ 63 ಲಕ್ಷ ರೂ. ಅಕೌಂಟ್​ಗೆ ಹಣ ತಲುಪಿ ಆಗಿದೆ. ಬ್ಯಾಂಕ್​ನಿಂದ ಮಾತ್ರ ಹಣ ನಿಧಾನ ಆಗಿದೆ. ನಮ್ಮಿಂದ ಹಣ ಈಗಾಗಲೇ ವರ್ಗಾವಣೆ ಆಗಿದೆ. ಸರ್ಕಾರದಿಂದ ಯಾವುದೇ ತೊಂದರೆ ಆಗಿಲ್ಲ. ಸರ್ಕಾರದ ಖಜಾನೆಯಲ್ಲಿ ಹಣ ಇದೆ. ಇನ್ನೂ ನಾಲ್ಕೈದು ದಿನಗಳಲ್ಲಿ ಹಣ ಎಲ್ಲರಿಗೂ ವರ್ಗಾವಣೆ ಆಗಲಿದೆ. 1.28 ಕೋಟಿ ಯಜಮಾನಿಯರಿಗೆ ಹಣ ಹೋಗುತ್ತೆ. ಹೊಸದಾಗಿ ನೊಂದಣಿ ಆದವರಿಗೂ ಯೋಜನೆ ಲಾಭ ಸಿಗುತ್ತೆ ಎಂದು ಅವರು ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!