ಸೆ.10ರಂದು ಬೆಂಗಳೂರಿನಲ್ಲಿ ನಡೆಯಲಿರುವ SSF ಗೋಲ್ಡನ್ ಫಿಫ್ಟಿ ಸಮ್ಮೇಳನ ಯಶಸ್ವಿಗೊಳಿಸಲು ಸಖಾಫಿ ಕೌನ್ಸಿಲ್ ಪುತ್ತೂರು ತಾಲೂಕು ಸಮಿತಿ ಕರೆ
2023 ಸೆಪ್ಟೆಂಬರ್ 10 ರಂದು ಬೆಂಗಳೂರಿನಲ್ಲಿ ನಡೆಯುವ SSF ಗೋಲ್ಡನ್ ಫಿಫ್ಟಿ ಸಮ್ಮೇಳನ ಯಶಸ್ವಿಗೊಳಿಸಲು ಸಖಾಫಿ ಕೌನ್ಸಿಲ್ ಪುತ್ತೂರು ತಾಲೂಕು ಕರೆ ನೀಡಿದೆ.
ಮುಂಬೈಯಲ್ಲಿ ನವೆಂಬರ್ 25,26,27 ದಿನಾಂಕಗಳಲ್ಲಿ ನಡೆಯುವ SSF ಗೋಲ್ಡನ್ ಫಿಫ್ಟಿ ಮಹಾ ಸಮ್ಮೇಳನದ ಪ್ರಯುಕ್ತ ಬೆಂಗಳೂರಿನಲ್ಲಿ 2023 ಸೆಪ್ಟೆಂಬರ್ 10 ಕರ್ನಾಟಕ ರಾಜ್ಯ SSF ಗೋಲ್ಡನ್ ಫಿಫ್ಟಿ ಸಮ್ಮೇಳನ ನಡೆಯಲಿದೆ.
ಬೆಳಿಗ್ಗೆ ಯಿಂದ ರಾತ್ರಿ ತನಕ ವಿವಿಧ ಸೆಷನ್ ಗಳಾಗಿ ಕಾರ್ಯಕ್ರಮ ನಡೆಯಲಿದೆ. ಸಮಾರೋಪ ಸಮಾರಂಭದಲ್ಲಿ ಇಂಡಿಯನ್ ಗ್ರಾಂಡ್ ಮುಫ್ತಿ ಶೈಖುನಾ ಸುಲ್ತಾನುಲ್ ಉಲಮಾ ಎ ಪಿ ಉಸ್ತಾದ್ ಮುಖ್ಯ ಪ್ರಭಾಷಣ ಗೈಯ್ಯಲಿದ್ದಾರೆ. ಆದುದರಿಂದ ಈ ಕಾರ್ಯಕ್ರಮದಲ್ಲಿ ಸುನ್ನೀ ಸಂಘ ಕುಟುಂಬದ ಕಾರ್ಯಕರ್ತರೆಲ್ಲರೂ ಭಾಗವಹಿಸಿ ಅತ್ಯಂತ ಯಶಸ್ವಿಗೊಳಿಸಬೆಕಾಗಿ ಸಖಾಫಿ ಕೌನ್ಸಿಲ್ ಪುತ್ತೂರು ತಾಲೂಕು ಇದರ ಪದಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.