ಕರಾವಳಿರಾಜಕೀಯ

ಪುತ್ತೂರು: ಎಸ್.ಡಿ.ಪಿ.ಐ ಸಭೆ



ಪುತ್ತೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುತ್ತೂರು ವಿಧಾನ ಸಭಾ ಕ್ಷೇತ್ರ ಸಮಿತಿಯ ಮಾಸಿಕ ಸಭೆ ಸೆ.9ರಂದು ಪಕ್ಷದ ಕಚೇರಿಯಲ್ಲಿ ನಡೆಯಿತು. ಎಸ್ ಡಿ ಪಿ ಐ ಪುತ್ತೂರು ಕ್ಷೇತ್ರ ಸಮಿತಿ ಅಧ್ಯಕ್ಷ ಹಾಜಿ ಇಬ್ರಾಹಿಂ ಸಾಗರ್ ಅಧ್ಯಕ್ಷತೆ ವಹಿಸಿದ್ದರು.

ಸಭೆಯಲ್ಲಿ ಜಿಲ್ಲಾ ಸಮಿತಿ ಸದಸ್ಯರಾದ ಅಬೂಬಕ್ಕರ್ ಸಿದ್ದಿಕ್ ರವರು ಮಾತನಾಡಿ ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡಿದರು. ಸಭೆಯಲ್ಲಿ 5 ಬ್ಲಾಕ್ ಗಳ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳು ಹಾಜರಿದ್ದರು. ಕ್ಷೇತ್ರ ಸಮಿತಿಯ ಕಾರ್ಯದರ್ಶಿಅಬ್ದುಲ್ ರಹಿಮಾನ್ ಸ್ವಾಗತಿಸಿದರು . ಜೊತೆ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಕೊಡಿಪ್ಪಾಡಿ ವಂದಿಸಿದರು.

Leave a Reply

Your email address will not be published. Required fields are marked *

error: Content is protected !!