ರಾಜಕೀಯರಾಜ್ಯ

ಯಡಿಯೂರಪ್ಪ ಅವರನ್ನು ಕಡೆಗಣಿಸಿರುವುದು ಬಿಜೆಪಿ ಸೋಲಿಗೆ ಕಾರಣ: ರೇಣುಕಾಚಾರ್ಯ



ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರನ್ನು ಕಡೆಗಣಿಸಿದ್ದೇ ಬಿಜೆಪಿ ಪಕ್ಷದ ಸೋಲಿಗೆ ಕಾರಣ ಎಂದು ಮಾಜಿ ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು ಯಡಿಯೂರಪ್ಪ ನೋಡದ ಹಳ್ಳಿಗಳಿಲ್ಲ, ಬೂತ್ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸಿದ್ದಾರೆ. ದೇಶಕ್ಕೆ ನರೇಂದ್ರ ಮೋದಿ ಅವರಂತೆ ರಾಜ್ಯಕ್ಕೆ ಯಡಿಯೂರಪ್ಪ ಅವಶ್ಯಕ. ಹೋರಾಟಕ್ಕೆ, ಚುನಾವಣಾ ಪ್ರವಾಸಕ್ಕೆ, ಮತಗಳಿಗೆ ಯಡಿಯೂರಪ್ಪ ಬೇಕಾಗಿದ್ದಾರೆ ಎಂದರು.

ಬಿಜೆಪಿಗೆ ಸಾಕಷ್ಟು ಹಾನಿಯಾದ ಬಳಿಕ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರನ್ನು ಮುಂದೆ ತಂದಿದ್ದಾರೆ ಎಂದರು. ನಾನು ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಚುನಾವಣಾ ಆಕಾಂಕ್ಷಿ. ಟಿಕೆಟ್ ಸಿಗುತ್ತದೊ ಇಲ್ಲವೋ ಕಾದು ನೋಡುತ್ತೇನೆ. ಸಿಗದೇ ಇದ್ದರೆ ಕ್ಷೇತ್ರದ ಮುಖಂಡರು ಕಾರ್ಯಕರ್ತರ ಅಭಿಪ್ರಾಯ ಪಡೆದು ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ ಎಂದರು.

Leave a Reply

Your email address will not be published. Required fields are marked *

error: Content is protected !!