ಚೈತ್ರಾ ಕುಂದಾಪುರ ಸಿಸಿಬಿ ಕಷ್ಟಡಿಗೆ
ಉದ್ಯಮಿಯೊಬ್ಬರಿಗೆ ಚುನಾವಣೆಯಲ್ಲಿ ಟಿಕೆಟ್ ಕೊಡಿಸುವುದಾಗಿ ಕೋಟ್ಯಂತರ ರೂ. ವಂಚಿಸಿದ ಆರೋಪಕ್ಕೆ ಸಂಬಂಧಿಸಿ ಹಿಂದೂ ಸಂಘಟನೆ ಕಾರ್ಯಕರ್ತೆ ಚೈತ್ರಾ ಕುಂದಾಪುರ ಮತ್ತು ಆಕೆಯ ಸಹಚರರನ್ನು ಬೆಂಗಳೂರು ಸಿಸಿಬಿ ಪೊಲೀಸರು ಸೆ.13ರಂದು ಬೆಂಗಳೂರಿನ ಕೋರ್ಟ್ ಗೆ ಹಾಜರು ಪಡಿಸಿದ್ದು ಸೆ.23 ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಆರೋಪಿಗಳಾದ ಶ್ರೀಕಾಂತ್, ಗಗನ್, ರಮೇಶ್, ಪ್ರಜ್ವಲ್, ಧನ್ ರಾಜ್ ಮೊದಲಾದವರನ್ನು ಕೂಡಾ 10 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ವಂಚನೆ ಪ್ರಕರಣ ಬೆಳಕಿಗೆ ಬರುವ ಮುನ್ನ ಚೈತ್ರಾ ಕುಂದಾಪುರ ಅವರು ದುಬಾರಿ ಬೆಲೆಯ ಕಾರು ಖರೀದಿಸಿ ಐಷಾರಾಮಿ ಜೀವನ ನಡೆಸುತ್ತಿದ್ದರು ಎನ್ನಲಾಗಿದೆ.