ಚೈತ್ರಾ ಕುಂದಾಪುರ ವಂಚನೆ ಪ್ರಕರಣ: ಮಾಜಿ ಸಿಎಂ ಬೊಮ್ಮಾಯಿ ಹೇಳಿದ್ದೇನು ಗೊತ್ತಾ?
ಉದ್ಯಮಿಗೆ ಕೋಟ್ಯಂತರ ವಂಚಿಸಿದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಚೈತ್ರಾ ಕುಂದಾಪುರ ಬಗ್ಗೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಕರಣಕ್ಕೂ ನಮಗೂ ಸಂಬಂಧವಿಲ್ಲ. ಈ ಪ್ರಕರಣದಲ್ಲಿ ಸಮಗ್ರ ತನಿಖೆಯಾಗಬೇಕು. ಯಾರೇ ಇದ್ದರೂ ಶಿಕ್ಷೆಯಾಗಬೇಕು ಎಂದು ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಯಲ್ಲಿ ಟಿಕೆಟ್ ಕೊಡಿಸುತ್ತೇವೆಂದು ಹಣ ಪಡೆದಿರುವುದನ್ನು ನಾವು ಗಂಭೀರವಾಗಿ ಪರಿಗಣಿಸುತ್ತೇವೆ. ಬಿಜೆಪಿಗೆ ಇದರಲ್ಲಿ ಯಾವುದೇ ಸಂಬಂಧವಿಲ್ಲ ಎನ್ನುವುದು ಸ್ಪಷ್ಟ. ಹೋರಾಟ ಹಲವರು ಮಾಡುತ್ತಾರೆ, ಹಾಗಂತ ಅದಕ್ಕೆಲ್ಲವಕ್ಕೂ ಪಕ್ಷಕ್ಕೆ ಸಂಬಂಧವಿಲ್ಲ. ತನಿಖೆ ಆಗಿ ಸತ್ಯ ಹೊರ ಬರಲಿ, ಈ ಪ್ರಕರಣದ ಜೊತೆ ಬಿಜೆಪಿಗೆ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದರು.