ಜಿಲ್ಲೆರಾಜಕೀಯ

ಗಣೇಶ ಚತುರ್ಥಿ: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಂಗಳವಾರ ರಜೆ- ಸರಕಾರದ ಆದೇಶ



ಈ ಬಾರಿ ಗಣೇಶ ಚತುರ್ಥಿಯ ಪ್ರಯುಕ್ತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸೋಮವಾರದ ಬದಲಾಗಿ ಮಂಗಳವಾರ ರಜೆ ನೀಡಲು ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯದಲ್ಲಿ ಗಣೇಶ ಹಬ್ಬದ ಆಚರಣೆಯ ದಿನದ ಬಗ್ಗೆ ಗೊಂದಲ ಎದುರಾಗಿತ್ತು. ಹಲವೆಡೆ ಸೋಮವಾರ (ಸೆ.18) ದಂದು ಹಬ್ಬ ಆಚರಿಸುತ್ತಿದ್ದರೆ, ಮತ್ತೆ ಕೆಲವೆಡೆ ಮಂಗಳವಾರ (ಸೆ.19) ದಂದು ಆಚರಿಸಲಾಗುತ್ತಿದೆ. ಸರ್ಕಾರ ನಿಗದಿ ಪಡಿಸಿದ ರಜೆಯು ಸೋಮವಾರ ಆಗಿತ್ತು.

ಕರಾವಳಿ ಜಿಲ್ಲೆಗಳಲ್ಲಿ ಮಂಗಳವಾರ ಹಬ್ಬ ಆಚರಿಸುವ ಕಾರಣ ಅದೇ ದಿನ ಸರ್ಕಾರಿ ರಜೆ ನೀಡಬೇಕು ಎಂಬ ಆಗ್ರಹ ಕೇಳಿ ಬಂದಿತ್ತು. ಎಲ್ ಜನಪ್ರತಿನಿಧಿಗಳು ಕೂಡಾ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ಇದೀಗ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಮುಖ್ಯ ಕಾರ್ಯದರ್ಶಿ ಮತ್ತು ಜಿಲ್ಲಾಧಿಕಾರಿಯವರಿಗೆ ಸೆ.19ರಂದು ರಜೆ ನೀಡಲು ಪತ್ರ ಮೂಲಕ ತಿಳಿಸಿದ್ದು ಇದೀಗ ಸರ್ಕಾರದ ಅಧಿಕೃತ ಆದೇಶ ಬಂದಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!