ಮೋಹನ್ ಕುಮಾರ್ ಸರಕಾರಿ ಅಭಿಯೋಜಕರಾಗಿ ಮುಂಬಡ್ತಿ
ಮಂಗಳೂರಿನ 3ನೇ ಜೆ ಎಂ ಎಫ್ ಸಿ ನ್ಯಾಯಲಯದಲ್ಲಿ ಸಹಾಯಕ ಸರಕಾರಿ ಅಭಿಯೋಜಕರಾಗಿ ಹಲವಾರು ವರ್ಷಗಳ ಕಾಲ ಸೇವೆ ಸಲ್ಲಿಸಿ ನಂತರ 2 ನೆ ಸಿ ಜೇ ಎಂ ನ್ಯಾಯಲಯದಲ್ಲಿ ಹಿರಿಯ ಸಹಾಯಕ ಸರಕಾರಿ ಅಭಿಯೋಜಕರಾಗಿ ಹಾಗೂ ಮಂಗಳೂರಿನ
ಎಸ್ ಪಿ ಕಚೇರಿಯಲ್ಲಿ ಮತ್ತು ಪೋಲಿಸ್ ಆಯುಕ್ತರ ಕಚೇರಿಯಲ್ಲಿ ಕಾನೂನೂ ಅಧಿಕಾರಿ (ಕಿರಿಯ )ಆಗಿ ಕಾರ್ಯ ನಿರ್ವಹಿಸುತ್ತಿದ್ದ ಮೋಹನ್ ಕುಮಾರ್ ಮಂಗಳೂರಿನ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್ . ಟಿ.ಎಸ್.ಸಿ- 2 ಪೋಕ್ಸೋ ವಿಶೇಷ ನ್ಯಾಯಾಲಯದ ಸರಕಾರಿ ಅಭಿಯೋಜಕರಾಗಿ ಪದೋನ್ನತಿಗೊಳಿಸಿ ಸರಕಾರ ಆದೇಶಿಸಿದೆ.
ಹಿರಿಯ ಸಹಾಯಕ ಸರಕಾರಿ ಅಭಿಯೋಜಕರಾಗಿದ್ದ ಇವರು ಹಲವಾರು ಪ್ರಕರಣಗಳಲ್ಲಿ ಸರ್ಕಾರದ ಪರವಾಗಿ ಸಮರ್ಥವಾಗಿ ವಾದ ಮಂಡಿಸಿ ಆರೋಪಿಗಳಿಗೆ ಜೈಲು ಶಿಕ್ಷೆ ಕೊಡಿಸುವಲ್ಲಿ ಯಶಸ್ವಿಯಾಗಿದ್ದರು. ಇವರು ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಇಚಿಲಂಪಾಡಿ ನಿವಾಸಿಯಾಗಿದ್ದಾರೆ.