ಚೈತ್ರಾ ಕುಂದಾಪುರ ವಂಚನೆ ಪ್ರಕರಣ: ಮೂರನೇ ಆರೋಪಿ ಹಾಲಶ್ರೀ ಸ್ವಾಮೀಜಿ ಅರೆಸ್ಟ್
ಬೆಂಗಳೂರು: ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಬಿಜೆಪಿಯಿಂದ ಎಂ ಎಲ್ ಎ ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂ. ಪಡೆದು ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಮೂರನೇ ಆರೋಪಿಯಾಗಿರುವ ವಿಜಯನಗರ ಜಿಲ್ಲೆಯ ಹಿರೇಹಡಗಲಿ ತಾಲೂಕಿನ ಅಭಿನವ ಹಾಲಶ್ರೀ ಸ್ವಾಮೀಜಿಯನ್ನು ಬೆಂಗಳೂರು ಸಿಸಿಬಿ ಪೊಲೀಸರು ಒಡಿಶಾದ ಕಟಕ್ ನಲ್ಲಿ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ಚಲಿಸುತ್ತಿದ್ದ ರೈಲಿನಲ್ಲೇ ಹಾಲಶ್ರೀಯನ್ನು ಬಂಧಿಸಿರುವ ಪೊಲೀಸರು ಅಲ್ಲಿಂದ ಬೆಂಗಳೂರಿಗೆ ಕರೆ ತರುತ್ತಿದ್ದಾರೆ ಎನ್ನಲಾಗಿದೆ.