ಚೈತ್ರಾ ಕುಂದಾಪುರ & ಟೀಂ ವಂಚನೆ ಪ್ರಕರಣ: ಹಾಲಶ್ರೀ ಸ್ವಾಮಿ ಸೆ.29ರವರೆಗೆ ಸಿಸಿಬಿ ವಶಕ್ಕೆ
ಬೆಂಗಳೂರು: ಬಿಜೆಪಿಯಿಂದ MLA ಟಿಕೆಟ್ ಕೊಡಿಸುವುದಾಗಿ ಹೇಳಿ ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬವರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮೂರನೇ ಆರೋಪಿ ಹಾಲಶ್ರೀ ಸ್ವಾಮಿ ಅವರನ್ನು ನ್ಯಾಯಾಲಯ ಸೆ.29ರವರೆಗೆ ಸಿಸಿಬಿ ವಶಕ್ಕೆ ನೀಡಿದೆ.
ಪ್ರಕರಣದ ಎ3 ಆರೋಪಿಯಾಗಿರುವ ಹಾಲಶ್ರೀ ಸ್ವಾಮಿ ಅವರಿಗೆ ಜಾಮೀನು ನೀಡುವಂತೆ ಅವರ ಪರ ವಕೀಲರು ಕೋರಿದರಾದರೂ, ಈ ಮನವಿಯನ್ನು ತಿರಸ್ಕರಿಸಿರುವ ಬೆಂಗಳೂರಿನ 19ನೇ ಎಸಿಎಂಎಂ ನ್ಯಾಯಾಲಯವು ಹೆಚ್ಚಿನ ತನಿಖೆಗಾಗಿ ಸಿಸಿಬಿ ಪೊಲೀಸರ ವಶಕ್ಕೆ ಒಪ್ಪಿಸಿದೆ ಎಂದು ತಿಳಿದು ಬಂದಿದೆ.