ಕೆಯ್ಯೂರು: ರಸ್ತೆ ದಾಟುತ್ತಿದ್ದ ಯುಕೆಜಿ ವಿದ್ಯಾರ್ಥಿಗೆ ಕಾರು ಡಿಕ್ಕಿ – ವಿದ್ಯಾರ್ಥಿ ಮೃತ್ಯು
ಪುತ್ತೂರು: ರಸ್ತೆ ದಾಟುತ್ತಿದ್ದ ಯುಕೆಜಿ ವಿದ್ಯಾರ್ಥಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿ ಮೃತಪಟ್ಟ ಘಟನೆ ಕೆಯ್ಯೂರಿನಿಂದ ವರದಿಯಾಗಿದೆ.
ಕೆಯ್ಯೂರು ಗ್ರಾಮದ ಪಾತುಂಜ ನಿವಾಸಿ ಹಾರೀಸ್ ದಾರಿಮಿರವರ ಪುತ್ರ ಕೆಯ್ಯೂರು ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಯುಕೆಜಿ ವಿದ್ಯಾರ್ಥಿ ಮೊಹಮ್ಮದ್ ಆದಿಲ್ 5 ವ ರವರು ಸೆ. 23ರಂದು ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ವೇಳೆ ಶಾಲಾ ಬಳಿ ರಸ್ತೆ ದಾಟುವ ವೇಳೆ ಬೆಳ್ಳಾರೆಯಿಂದ ಪುತ್ತೂರು ಕಡೆಗೆ ಬರುತ್ತಿದ್ದ ಕಾರೊಂದು ಡಿಕ್ಕಿ ಹೊಡೆದಿದೆ.

ಗಂಭೀರ ಗಾಯಗೊಂಡಿದ್ದ ಬಾಲಕನನ್ನು ತಕ್ಷಣವೇ ಪುತ್ತೂರು ಆಸ್ಪತ್ರೆಗೆ ಕೊಂಡೋಗಿ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕೊಂಡೊಯ್ಯಲಾಯಿತು . ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಮೃತಪಟ್ಟಿದೆ ಎಂದು ತಿಳಿದುಬಂದಿದೆ