ಮತದಾರರಿಗೆ ಐರನ್ ಬಾಕ್ಸ್, ಕುಕ್ಕರ್ ಹಂಚಿದ ಆರೋಪ- ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ದೂರು
ವಿಧಾನಸಭಾ ಚುನಾವಣೆಗೂ ಮುನ್ನ ವರುಣಾ ಕ್ಷೇತ್ರದ ಸಮುದಾಯವೊಂದಕ್ಕೆ ಐರನ್ ಬಾಕ್ಸ್ ಮತ್ತು ಕುಕ್ಕರ್‌ಗಳನ್ನು ಹಂಚಿರುವುದಾಗಿ ಆರೋಪಿಸಿ ಮೈಸೂರು ಬಿಜೆಪಿ ಘಟಕದಿಂದ ನಂಜನಗೂಡು ಪಟ್ಟಣ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ಸಿದ್ದರಾಮಯ್ಯರವರು ಗೆಲುವಿಗಾಗಿ ಕ್ಷೇತ್ರದ ಒಂದು ಸಮುದಾಯದ ಮತದಾರರಿಗೆ ಅಡುಗೆ ಮಾಡುವ ಕುಕ್ಕರ್ ಮತ್ತು ಇಸ್ತ್ರಿ ಪೆಟ್ಟಿಗೆಗಳನ್ನು ಹಂಚಿದ್ದಾರೆ. ಇದರಿಂದ ಚುನಾವಣೆಯನ್ನು ಗೆದ್ದಿರುವುದರ ಬಗ್ಗೆ ಅವರ ಪುತ್ರ ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಮಡಿವಾಳ ಸಮಾಜದ ಉದ್ಘಾಟನಾ ಸಮಾರಂಭದಲ್ಲಿ ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ. ಅವರ ಮೇಲೆ ಕಾನೂನು ರೀತಿ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಮನವಿ ಮಾಡಲಾಗಿದೆ.