ಎಸ್ ಎಸ್ ಎಫ್ ಸುಳ್ಯ ಡಿವಿಜನ್ ವತಿಯಿಂದ 308ನೇ ರಕ್ತದಾನ ಶಿಬಿರ: ಸಂಘಟನೆಯ ಈ ಕಾರ್ಯಕ್ರಮ ಶ್ಲಾಘನೀಯ ಶಾಸಕಿ ಕು.ಭಾಗಿರತಿ ಮುರುಳ್ಯ
ಸುಳ್ಯ: ಜಿಲ್ಲಾ ಆಸ್ಪತ್ರೆ ವೆನ್ಲಾಕ್ ಮತ್ತು ತಾಲೂಕು ಆಸ್ಪತ್ರೆ ಸುಳ್ಯ ಇದರ ಸಹಭಾಗಿತ್ವದಲ್ಲಿ ಎಸ್ಎಸ್ಎಫ್ ಸುಳ್ಯ ಡಿವಿಝನ್ ವತಿಯಿಂದ 308ನೇ ರಕ್ತದಾನ ಶಿಬಿರ ಸೆಪ್ಟೆಂಬರ್ 25 ರಂದು ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ನಡೆಯಿತು.
ಸುಳ್ಯ ವಿಧಾನಸಭಾ ಕ್ಷೇತ್ರ ಶಾಸಕಿ ಕು.ಭಾಗಿರತಿ ಮುರುಳ್ಯ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ ಸಂಘಟನೆಯ ಕಾರ್ಯಕ್ರಮವನ್ನು ಶ್ಲಾಘಿಸಿದರು. ಸುಳ್ಯ ತಾಲೂಕಿನ ಬೇರೆ ಬೇರೆ ಕಡೆಗಳಲ್ಲಿ ಎಸ್ ಎಸ್ ಎಫ್ ಸಂಘಟನೆ ರಕ್ತದಾನ ಶಿಬಿರವನ್ನು ಹಮ್ಮಿಕೊಂಡು ಸಮಾಜಮುಖಿ ಕಾರ್ಯಕ್ರಮ ನಡೆಸುತ್ತಿದೆ.ಇಂತಹ ಕಾರ್ಯಕ್ರಮಗಳು ಶ್ಲಾಘನೀಯವಾದದ್ದು ಎಂದು ಹೇಳಿದರು.
ಸಭಾ ಕಾರ್ಯಕ್ರಮದ ವೇದಿಕೆಯಲ್ಲಿ ಉಪಸ್ಥಿತರಿದ್ದ ಮುಖ್ಯ ಅತಿಥಿಗಳಾದ ತಾಲೂಕು ಆರೋಗ್ಯ ಅಧಿಕಾರಿ ಡಾ.ನಂದಕುಮಾರ್,ಸುಳ್ಯ ಪೊಲೀಸ್ ಠಾಣಾ ಉಪನಿರೀಕ್ಷಕ ಈರಯ್ಯ ದೂಂತೂರು,ತಾಲೂಕು ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಕರುಣಾಕರ,ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ ಸಿ ಜಯರಾಮ್,ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿ ಪಿ ಬಿ ಸುಧಾಕರ್ ರೈ,ಸುಳ್ಯ ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ಬಂಟ್ವಾಳ್, ಅಡ್ವಕೇಟ್ ಅಬೂಬಕ್ಕರ್ ಅಡ್ಕಾರ್ ಮೊದಲಾದವರು ಮಾತನಾಡಿ ರಕ್ತದಾನದ ಮಹತ್ವದ ಕುರಿತು, ಸಂಘಟನೆಯ ಈ ಉತ್ತಮ ಕಾರ್ಯದ ಕುರಿತು ಪ್ರಶಂಸೆ ವ್ಯಕ್ತಪಡಿಸಿದರು.
ವೇದಿಕೆಯಲ್ಲಿ ಸುಳ್ಯ ಆರೋಗ್ಯ ಕೇಂದ್ರದ ಡಾ.ವಿಜಯಶ್ರೀ,ನಗರ ಪಂಚಾಯತ್ ಸದಸ್ಯರುಗಳಾದ ಶ್ರೀಮತಿ ಕಿಶೋರಿ ಶೇಟ್, ಕೆ ಎಸ್ ಉಮ್ಮರ್, ಶರೀಫ್ ಕಂಠಿ, ರಿಯಾಜ್ ಕಟ್ಟೆಕ್ಕಾರ್ಸ್, ಕೆ ಎಂ ಜೆ ಸುಳ್ಯ ಝೋನ್ ಅಧ್ಯಕ್ಷ ಅಬ್ದುಲ್ ಹಮೀದ್ ಬೀಜಕೊಚ್ಚಿ,ಸುಳ್ಯ ಝೋನ್ ಎಸ್ ವೈ ಎಸ್ ಅಧ್ಯಕ್ಷ ಅಶ್ರಫ್ ಸಅದಿ,ಮುಳುಗು ತಜ್ಞ ಅಬ್ಬಾಸ್ ಪೈಚಾರ್,ದ ಕ ಜಿಲ್ಲಾ ಅಕ್ಷಯ ಚಾರಿಟೇಬಲ್ ಅಧ್ಯಕ್ಷ ಕರೀಂ ಕೆದ್ಕಾರ್,ದ ಕ ಜಿಲ್ಲಾ ವಖ್ಫ್ ಬೋರ್ಡ್ ಉಪಾಧ್ಯಕ್ಷ ಅಬ್ದುಲ್ ರಹಿಮಾನ್,ಅಡ್ವಕೇಟ್ ಮೂಸಾ ಪೈಂಬೆಚ್ಚಾಲ್,ಎಸ್ ವೈ ಎಸ್ ರಾಜ್ಯ ಸಮಿತಿ ಸದಸ್ಯ ಸಿದ್ದಿಕ್ ಕಟ್ಟೆಕ್ಕಾರ್ಸ್ ಮೊದಲಾದವರು ಉಪಸ್ಥಿತರಿದ್ದರು.
ಶಿಬಿರದಲ್ಲಿ ಸುಳ್ಯ ತಾಲೂಕಿನ ವಿವಿಧ ಭಾಗಗಳಿಂದ ಸುಮಾರು 60 ಕ್ಕೂ ಹೆಚ್ಚು ಮಂದಿ ರಕ್ತದಾನದಲ್ಲಿ ಪಾಲ್ಗೊಂಡರು.
ಕಾರ್ಯಕ್ರಮದಲ್ಲಿ ಸುಳ್ಯ ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಸುಳ್ಯ ಜೋನ್ ಎಸ್ ವೈ ಎಸ್ ಸಮಿತಿ ಸಾಂತ್ವಾನ ವಿಭಾಗದ ಕಾರ್ಯದರ್ಶಿ ಸಿದ್ದೀಕ್ ಗೂನಡ್ಕ ಸ್ವಾಗತಿಸಿ ಆಯುಷ್ಮಾನ್ ವಿಭಾಗದ ಆರೋಗ್ಯ ಮಿತ್ರ ಮುರಳಿ ವಂದಿಸಿದರು. ಕೆ ಸಿ ಎಫ್ ಮುಖಂಡ ಕಬೀರ್ ಜಟ್ಟಿಪಳ್ಳ ಕಾರ್ಯಕ್ರಮ ನಿರೂಪಿಸಿದರು.
ಎಸ್ ಎಸ್ ಎಫ್ ಸುಳ್ಯ ಡಿವಿಝನ್ ಸಮಿತಿಯ ಪದಾಧಿಕಾರಿಗಳು, ಸದಸ್ಯರುಗಳು, ಸಂಘಟನೆಯ ಕಾರ್ಯಕರ್ತರು ಸಹಕರಿಸಿದರು.