ಕರಾವಳಿ

ಸುಳ್ಯ: ಜ್ಯೂಸ್ ಕುಡಿದ ಮಹಿಳೆ ಸಾವು



ಸುಳ್ಯ: ವಿಷಕಾರಿ ಹಣ್ಣಿನ ಜ್ಯೂಸ್ ತಯಾರಿಸಿ ಕುಡಿದ ಪರಿಣಾಮ ಮಹಿಳೆಯೋರ್ವಳು ಮೃತಪಟ್ಟ ಘಟನೆ ಅಮರಪಡ್ಡೂರು ಗ್ರಾಮದ ಕುಳ್ಳಾಜಿ ಎಂಬಲ್ಲಿ ನಡೆದಿರುವುದು ವರದಿಯಾಗಿದೆ.

ಮೃತರನ್ನು ಜಗನ್ನಾಥ ನಾಯ್ಕ ದೊಡ್ಡೇರಿ ಅವರ ಪತ್ನಿ ಲೀಲಾವತಿ (35) ಎಂದು ತಿಳಿದುಬಂದಿದೆ.

ಒಂದು ವಾರದ ಹಿಂದೆ ಕಾಡಿನಲ್ಲಿ ಸಿಗುವ ಮೈರೋಳ್ ಹಣ್ಣು ಎಂದು ಭಾವಿಸಿ ಮನೆಗೆ ತಂದು, ಅದರ ರಸ ತೆಗೆದು ಶರ್ಬತ್ ಮಾಡಿ ಲೀಲಾವತಿ ಹಾಗೂ ಅವರ ತಂದೆ ಸೇವನೆ ಮಾಡಿದ್ದರು ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!