ಬಿಜೆಪಿ ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದರೆ, ಕಾಂಗ್ರೆಸ್ ಅದನ್ನು ಜೋಡಿಸುತ್ತಿದೆ-ಡಿಕೆಶಿ
ಬಿಜೆಪಿ ವಿರುದ್ಧ ಡಿಸಿಎಂ ಡಿಕೆ ಶಿವಕುಮಾರ್ ಗರಂ ಆಗಿದ್ದಾರೆ. ಬಿಜೆಪಿ ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದರೆ, ಕಾಂಗ್ರೆಸ್ ಅದನ್ನು ಜೋಡಿಸುತ್ತಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಹಿಂದೂಗಳನ್ನು ಗುರಿಯಾಗಿಸಿಕೊಂಡು ದಾಳಿ ಮಾಡಿ ಭಯದ ವಾತಾವರಣ ಉಂಟು ಮಾಡಲಾಗಿದೆ ಎನ್ನುವ ಬಿಜೆಪಿ ಆರೋಪ ಕುರಿತು ಪ್ರತಿಕ್ರಿಯಿಸಿದ ಡಿಸಿಎಂ, ಕಬ್ಬಿಣದಿಂದ ಸೂಜಿ ಮತ್ತು ಕತ್ತರಿ ತಯಾರಿಸಬಹುದು. ಕಾಂಗ್ರೆಸ್ ಸೂಜಿಯಿಂದ ಹೊಲಿಯುವ ಕೆಲಸ ಮಾಡುತ್ತಿದ್ದರೆ, ಬಿಜೆಪಿಯವರು ಕತ್ತರಿಯಿಂದ ಕತ್ತರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.