ಮಾಜಿ ಪ್ರಧಾನಿ ದೇವೇ ಗೌಡ ಅವರು ಅ.8 ರಾತ್ರಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ್ದು ಅ. 9ರಂದು ಮುಂಜಾನೆ ದೇವರ ದರ್ಶನ ಪಡೆದಿರುವುದಾಗಿ ತಿಳಿದು ಬಂದಿದೆ.
ಸಹಾಯಕರ ಸಹಾಯದಿಂದ ದೇವಸ್ಥಾನಕ್ಕೆ ಪ್ರದಕ್ಷಿಣೆ ಹಾಕಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿ ಪ್ರಾರ್ಥನೆ ಸಲ್ಲಿಸಿದರು. ಜೆಡಿಎಸ್ ಮುಖಂಡ ಎಂ.ಬಿ ಸದಾಶಿವ ಜತೆಗಿದ್ದರು ಎಂದು ತಿಳಿದು ಬಂದಿದೆ.