ಬೆಂಗಳೂರು ಅತ್ತಿಬೆಲೆ ಪಟಾಕಿ ದುರಂತ: ನಾಲ್ವರು ಅಧಿಕಾರಿ ಸಿಬ್ಬಂದಿಯನ್ನು ಸೇವೆಯಿಂದ ಅಮಾನತುಗೊಳಿಸಿ ರಾಜ್ಯ ಸರಕಾರ ಆದೇಶ
ಬೆಂಗಳೂರು: ಅತ್ತಿಬೆಲೆ ಪಟಾಕಿ ದುರಂತದ ಹಿನ್ನಲೆಯಲ್ಲಿ ಆನೇಕಲ್ ತಹಶೀಲ್ದಾರ್(ಹಿಂದಿನ) ಶಶಿಧರ ಮಾಡ್ಯಾಳ್ ಸೇರಿದಂತೆ ನಾಲ್ವರು ಅಧಿಕಾರಿ ಸಿಬ್ಬಂದಿಯನ್ನು ಸೇವೆಯಿಂದ ಅಮಾನತುಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಬೆಂಗಳೂರು ನಗರ ಜಿಲ್ಲಾಧಿಕಾರಿ ನೀಡಿರುವ ವರದಿ ಆಧರಿಸಿ ಕರ್ತವ್ಯ ನಿರ್ಲಕ್ಷ್ಯತೆ ಆರೋಪದ ಮೇಲೆ ತಹಶೀಲ್ದಾರ್ ಶಶಿಧರ ಮಾಡ್ಯಾಳ್ ಅತ್ತಿಬೆಲೆ ನಾಡಕಚೇರಿ ಉಪತಹಸೀಲ್ದಾರ್ ಶ್ರೀಧರ್.ವಿ.ಸಿ ಅತ್ತಿಬೆಲೆ ವೃತ್ತದ ರಾಜಸ್ವ ನಿರೀಕ್ಷಕ ಪುಷ್ಪರಾಜ್.ಎ ಹಾಗೂ ಗ್ರಾಮ ಆಡಳಿತಾಧಿಕಾರಿ ಭಾಗೇಶ್ ಹೊಸಮನೆ ಅವರನ್ನು ಇಲಾಖೆ ವಿಚಾರಣೆ ಕಾಯ್ದಿರಿಸಿ ಸೇವೆಯಿಂದ ಅಮಾನತು ಮಾಡಿ ಕಂದಾಯ ಇಲಾಖೆ ಆದೇಶ ಹೊರಡಿಸಿದೆ.