ರೈತರಿಗೆ 7 ಗಂಟೆ ವಿದ್ಯುತ್ ನೀಡದಿದ್ದರೆ ವಿದ್ಯುತ್ ಕಚೇರಿಗಳಿಗೆ ಬೀಗ ಹಾಕಿ ಪ್ರತಿಭಟನೆ : ಬೊಮ್ಮಾಯಿ
ರಾಜ್ಯ ಸರ್ಕಾರ ರೈತರಿಗೆ ಏಳು ಗಂಟೆ ಥ್ರಿಫೆಸ್ ವಿದ್ಯುತ್ ನೀಡದಿದ್ದರೆ, ವಿದ್ಯುತ್ ಕಚೇರಿಗಳಿಗೆ ಬೀಗ ಹಾಕಿ ಉಗ್ರ ಪ್ರತಿಭಟನೆ ಮಾಡಲಾಗುವುದು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಮಾಜಿ ಸಚಿವ ಡಾ. ಸುಧಾಕರ್ ನೇತೃತ್ವದಲ್ಲಿ ಬಿಜೆಪಿ ವತಿಯಿಂದ ನಡೆದ ರೈತರ ಬೃಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದ್ಧಾರೆ. ಕರೆಂಟ್ ಕೊಡುವುದು ಸರ್ಕಾರದ ಕರ್ತವ್ಯ. ಅದು ಅವರದೇನು ಉಪಕಾರ ಅಲ್ಲ. ಈಗ ಇಂಧನ ಇಲಾಖೆ ಯಾವ ರೀತಿ ಕೆಲಸ ಮಾಡುತ್ತಿದೆ ಅಂತ ಅಧಿಕಾರಿಗಳನ್ನು ಕೇಳಿ ಹೇಳುತ್ತಾರೆ. ನಾನು ಅಧಿಕಾರದಲ್ಲಿದ್ದಾಗ ವಿದ್ಯುತ್ ಇಲಾಖೆಗೆ ಹತ್ತು ಸಾವಿರ ಕೊಟಿ ರೂ. ನೀಡಿದ್ದೆ. ಇವರು ಯಾವುದೇ ಅನುದಾನ ನೀಡಿಲ್ಲ. ಅನುದಾನ ನೀಡಲು ಇವರ ಬಳಿ ಹಣ ಇಲ್ಲ. ಕಲ್ಲಿದ್ದಲು ಖರೀದಿಸಲು ಹಣ ಇಲ್ಲ. ಸರ್ಕಾರದವರು ರೈತರಿಗೆ ಕೇವಲ ಎರಡು ತಾಸು ಕರೆಂಟ್ ಕೊಡುತ್ತಿದ್ದಾರೆ. ಮೂರು ತಿಂಗಳಲ್ಲಿ ಎರಡು ಬಾರಿ ಕರೆಂಟ್ ಬಿಲ್ ಹೆಚ್ಚಿಸಿದ್ದು, ಇದು ರೈತ ವಿರೊಧಿ ಸರ್ಕಾರ ಎಂದು ಬೊಮ್ಮಾಯಿ ವಾಗ್ದಾಳಿ ನಡೆಸಿದರು.