ಜಿಲ್ಲೆ

KSRTC ಬಸ್-ಟಾಟಾ ಸುಮೋ ಭೀಕರ ಅಪಘಾತಕ್ಕೆ ಐದು ಮಂದಿ ಮೃತ್ಯು, ನಾಲ್ವರಿಗೆ ಗಂಭೀರ ಗಾಯ



ಭೀಕರ ಅಪಘಾತಕ್ಕೆ ಐದು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. KSRTC ಬಸ್ ಹಾಗೂ ಟಾಟಾ ಸುಮೋ ವಾಹನ ಮುಖಾಮುಖಿ ಡಿಕ್ಕಿ ಸಂಭವಿಸಿ ಐವರು ಸ್ಥಳದಲ್ಲೇ ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನಿಡಗುಂದಿಕೊಪ್ಪ ಕ್ರಾಸ್ ಬಳಿ ಅ. 16ರಂದು ನಡೆದಿದೆ.

ಕಲಬುರಗಿಯಿಂದ ಶಿರಹಟ್ಟಿ ಫಕ್ಕೀರೇಶ್ವರ ಮಠದ ದರ್ಶನಕ್ಕೆ ತೆರಳುತ್ತಿದ್ದ ಟಾಟಾ ಸುಮೋ ವಾಹನದ ಹಿಂಬದಿಯ ಟೈರ್ ಸ್ಪೋಟಗೊಂಡು ಚಾಲಕನ ನಿಯಂತ್ರಣ ತಪ್ಪಿ ಎದುರಿಗೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿ ಹೊಡೆದ ರಭಸಕ್ಕೆ ಟಾಟಾ ಸುಮೋ ವಾಹನದಲ್ಲಿದ್ದ ಐದು ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡ ನಾಲ್ವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!