ದೇವೇಗೌಡ, ಕುಮಾರಸ್ವಾಮಿ ವಿರುದ್ಧ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಗರಂ
ಬೆಂಗಳೂರು: ಲೋಕಸಭೆ ಚುಣಾವಣೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡ ಹಿನ್ನೆಲೆ ಜೆಡಿಎಸ್ ವರಿಷ್ಠ ಹೆಚ್ಡಿ ದೇವೇಗೌಡ ಹಾಗೂ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ವಿರುದ್ಧ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಗರಂ ಆಗಿದ್ದಾರೆ.
ನಾನು ಅಧ್ಯಕ್ಷ, ನನ್ನನ್ನು ತೆಗೆದು ಹಾಕಲು ಸಾಧ್ಯವಿಲ್ಲ. ಪಕ್ಷ ಕುಟುಂಬದ ಸ್ವತ್ತಲ್ಲ ಎಂದು ಇಬ್ರಾಹಿಂ ಹೇಳಿದ್ದಾರೆ.
ಜೆಡಿಎಸ್ ದ್ದು ಜಾತ್ಯತೀತ ಸಿದ್ಧಾಂತ. ಬಿಜೆಪಿ ಸಿದ್ಧಾಂತವೇ ಬೇರೆ. ಜೆಡಿಎಸ್ ಕರ್ನಾಟಕ ಚಿಂತನ ಮಂಥನ ಸಭೆಯಲ್ಲಿ ಮಾತನಾಡಿದ ಅವರು, ಒರಿಜಿನಲ್ ಜೆಡಿಎಸ್ ನಮ್ಮದೇ, ಅಧ್ಯಕ್ಷ ಸ್ಥಾನದಿಂದ ತೆಗೆಯಲು ಆಗಲ್ಲ. ಚನ್ನಪಟ್ಟಣ ಕ್ಷೇತ್ರದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಗೆದ್ದಿದ್ದು ಹೇಗೆ? ಕುಮಾರಸ್ವಾಮಿ ಎಂಎಲ್ಎ ಆಗಿದ್ದಕ್ಕೆ ಅಮಿಶ್ ಶಾ ಕರೆದಿದ್ದು. ಮುಸ್ಲಿಮರ ಮತ ಹಾಕದಿದ್ದರೆ ನೀವು ಸೋತು ಮನೆಯಲ್ಲಿ ಇರಬೇಕಿತ್ತು ಎಂದರು.