ಮಲ್ಲಿಕಾರ್ಜುನ ಖರ್ಗೆ ಅಥವಾ ರಾಹುಲ್ ಗಾಂಧಿ ಪ್ರಧಾನಿ ಅಭ್ಯರ್ಥಿ ಸಾಧ್ಯತೆ- ಶಶಿ ತರೂರ್
ಮುಂಬರುವ ಲೋಕಸಭಾ ಚುನಾವಣೆ 2024ರಲ್ಲಿ “ಇಂಡಿಯಾ” ಮೈತ್ರಿಕೂಟ ಅಧಿಕಾರಕ್ಕೆ ಬರುವ ಸಾಧ್ಯತೆಯಿದ್ದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಥವಾ ರಾಹುಲ್ ಗಾಂಧಿ ಈ ಇಬ್ಬರಲ್ಲಿ ಒಬ್ಬರನ್ನು ಪ್ರಧಾನ ಮಂತ್ರಿ ಅಭ್ಯರ್ಥಿಯಾಗಿ ಪಕ್ಷ ಘೋಷಿಸಬಹುದು. ಈ ಮೂಲಕ ಖರ್ಗೆ ದಲಿತ ಸಮುದಾಯದಲ್ಲಿ ಮೊದಲ ಪ್ರಧಾನಿಯಾಗಬಹುದು ಎಂದು ಕಾಂಗ್ರೆಸ್ ಮುಖಂಡ ಶಶಿ ತರೂರ್ ತಿಳಿಸಿದ್ದಾರೆ.
ಉತ್ತಮವಾಗಿ ಆಡಳಿತ ನಡೆಸಿಕೊಂಡು ಬಂದಿರುವ ಗಾಂಧಿ ಕುಟುಂಬದ ಉತ್ತರಾಧಿಕಾರಿಯಾಗಿ ರಾಹುಲ್ ಗಾಂಧಿ ಮುಂದುವರೆಯಬಹುದು.
ಪ್ರಧಾನಿಯಾದವರು ಎಲ್ಲರನ್ನೂ ಸಮಾನವಾಗಿ ಕಾಣುವುದು ಮುಖ್ಯ. ಪಕ್ಷದಿಂದ ಆಯ್ಕೆಯಾಗುವ ಅಭ್ಯರ್ಥಿಯು ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸುವ ಸಾಮರ್ಥ್ಯ ಹೊಂದಿದ್ದಾರೆ ಎಂದು ತರೂರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ತರೂರ್ ಹೇಳಿಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.