ಗಾಝಾ ಆಸ್ಪತ್ರೆಯೊಂದರ ಮೇಲೆ ಇಸ್ರೇಲ್ ವೈಮಾನಿಕ ದಾಳಿ; ಕನಿಷ್ಠ 500 ಮಂದಿ ಮೃತ್ಯು..!
ಗಾಝಾ ನಗರದ ಅಲ್-ಅಹ್ಲಿ ಆಸ್ಪತ್ರೆಯ ಮೇಲೆ ಇಸ್ರೇಲ್ ವೈಮಾನಿಕ ದಾಳಿ ಮಾಡಿದೆ ಎಂದು ವರದಿಯಾಗಿದ್ದು ದಾಳಿಯಲ್ಲಿ ನೂರಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.
ಆಸ್ಪತ್ರೆಯಲ್ಲಿ ಸಾವಿರಾರು ನಾಗರಿಕರು ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದ್ದು ಬಾಂಬ್ ದಾಳಿಯಿಂದಾಗಿ ಕನಿಷ್ಠ 500 ಮಂದಿ ಸಾವನ್ನಪ್ಪಿದ್ದಾರೆ ಎಂದು ಗಾಝಾ ಆರೋಗ್ಯ ಸಚಿವಾಲಯ ಹೇಳಿರುವ ಬಗ್ಗೆ ವರದಿಯಾಗಿದೆ.