ರಾಜಕೀಯರಾಜ್ಯ

ನಿಮ್ಮ ಶುಭ ಹಾರೈಕೆಗಳು ನನ್ನನ್ನು ಮಾನಸಿಕವಾಗಿ ಮತ್ತಷ್ಟು ಗಟ್ಟಿ ಮಾಡಿದೆ, ಶೀಘ್ರದಲ್ಲಿಯೇ ಜನಸೇವೆಗೆ ಮರಳುತ್ತೇನೆ- ಬೊಮ್ಮಾಯಿನನಗೆ ಲಘು ಶಸ್ತ್ರ ಚಿಕಿತ್ಸೆಯಾಗಿದ್ದು, ವೈದ್ಯರ ಸಲಹೆ ಮೇರೆಗೆ ಈಗ ಸಂಪೂರ್ಣ ವಿಶ್ರಾಂತಿ ಪಡೆಯುತ್ತಿದ್ದೇನೆ. ಆದಷ್ಟು ಬೇಗ ಸಂಪೂರ್ಣ ಗುಣಮುಖನಾಗಿ ನಿಮ್ಮ ಮುಂದೆ ಬರಲು ಕಾತುರದಿಂದ ಕಾಯುತ್ತಿದ್ದೇನೆ. ಸದ್ಯ ಆಸ್ಪತ್ರೆಯಲ್ಲಿರುವ ಕಾರಣ, ನೀವೆಲ್ಲರೂ ಆಸ್ಪತ್ರೆಗೆ ನನ್ನನ್ನು ನೋಡಲು ಬಂದರೇ, ಆಸ್ಪತ್ರೆಯಲ್ಲಿರುವ ಇತರ ರೋಗಿಗಳಿಗೆ ತೊಂದರೆಯಾಗುತ್ತದೆ. ಹೀಗಾಗಿ ನೀವ್ಯಾರು ಆಸ್ಪತ್ರೆಗೆ ಬರಬಾರದೆಂದು ಕಳಕಳಿಯಾಗಿ ಮನವಿ ಮಾಡುತ್ತೇನೆ ಎಂದು ಮಾಜಿ ಸಿಎಂ ಬಸವರಾಜು ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

ನಿಮ್ಮ ಶುಭ ಹಾರೈಕೆಗಳು ನನ್ನನ್ನು ಮಾನಸಿಕವಾಗಿ ಮತ್ತಷ್ಟು ಗಟ್ಟಿ ಮಾಡಿದ್ದು, ಶೀಘ್ರದಲ್ಲಿಯೇ ಜನಸೇವೆಗೆ ಮರಳುತ್ತೇನೆ. ಶುಭ ಹಾರೈಸಿದ ಪ್ರತಿಯೊಬ್ಬರಿಗೂ ನನ್ನ ಹೃದಯಾಂತರಾಳದಿಂದ ಅನಂತ ಅನಂತ ಧನ್ಯವಾದಗಳು ಎಂದು ಅವರು ಬರೆದುಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!