ಬಡವರ ರಕ್ಷಣೆಗಾಗಿ ಜೈಲಿಗೆ ಹೋಗಲೂ ಸಿದ್ಧ: ಹರೀಶ್ ಪೂಂಜಾ
ಮಂಗಳೂರು: ಅರಣ್ಯಾಧಿಕಾರಿ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮೇಲೆ ಎಫ್‍ಐಆರ್ ದಾಖಲಾಗಿದ್ದು, ಈ ಬೆನ್ನಲ್ಲೇ ಶಾಸಕರು ಬಡವರ ರಕ್ಷಣೆಗಾಗಿ ಜೈಲಿಗೆ ಹೋಗಲು ಸಿದ್ಧ ಎಂದು ತಿಳಿಸಿದ್ದಾರೆ.
ನಾನು ಜನರಿಂದ ಶಾಸಕನಾಗಿ ಜನರಿಗೋಸ್ಕರ ಇರುವವನು ಅದಕ್ಕಾಗಿ ಯಾವ ಬೆಲೆ ತೆರಲು ಸಿದ್ಧ. ಬಡವರಿಗಾಗಿ ಇಂತಹ ನೂರು ಕೇಸು ಹಾಕಿಸಿಕೊಳ್ಳುವುದಕ್ಕೂ ಸಿದ್ಧನಿದ್ದೇನೆ, ಜೈಲು ಸೇರಲೂ ತಯಾರಿದ್ದೇನೆ ಎಂದು ಶಾಸಕ ಪೂಂಜಾ ಹೇಳಿದ್ದಾರೆ