ಮಾಜಿ ಸಿಎಂ ಬೊಮ್ಮಾಯಿ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆಗೆ ಭೇಟಿ ನೀಡಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆರೋಗ್ಯ ವಿಚಾರಿಸಿ ಬೇಗ ಗುಣಮುಖರಾಗುವಂತೆ ಹಾರೈಸಿದರು.
ಮೊಣಕಾಲು ನೋವು ತೀವ್ರವಾಗಿದ್ದರಿಂದ ವೈದ್ಯರ ಸಲಹೆ ಮೇರೆಗೆ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದು, ಮೊಣಕಾಲಿನ ಶಸ್ತ್ರ ಚಿಕಿತ್ಸೆ ಒಳಗಾಗಿದ್ದಾರೆ.