ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಗೆ 14 ದಿನಗಳ ನ್ಯಾಯಾಂಗ ಬಂಧನ
ಹುಲಿ ಉಗುರು ಹೊಂದಿರುವ ಆರೋಪದಲ್ಲಿ ಬಂಧನಕ್ಕೆ ಒಳಗಾಗಿರುವ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
‘ಬಿಗ್ ಬಾಸ್ ಕನ್ನಡ ಸೀಸನ್ 10’ ರಿಯಾಲಿಟಿ ಶೋನಲ್ಲಿ ಸ್ಪರ್ಧಿಸುತ್ತಿದ್ದ ಅವರನ್ನು ಅಕ್ಟೋಬರ್ 22ರ ರಾತ್ರಿ ಬಂಧಿಸಲಾಗಿತ್ತು. ಬಳಿಕ ಅರಣ್ಯಾಧಿಕಾರಿಗಳು ಕೋರಮಂಗಲ ಜಡ್ಜ್ ನಿವಾಸದಲ್ಲಿ ಹಾಜರುಪಡಿಸಿದರು. 2ನೇ ಎಸಿಜೆಎಂ ನ್ಯಾಯಾಧೀಶರು ವರ್ತೂರು ಸಂತೋಷ್ ಅವರಿಗೆ ನವೆಂಬರ್ 6ರವರೆಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದಾರೆ.