ಕರಾವಳಿಕ್ರೈಂ

ವಿದ್ಯುತ್ ಶಾಕ್ ಹೊಡೆದು ಕರಾಯದ ವ್ಯಕ್ತಿ ಮೃತ್ಯು



ಬೆಳ್ತಂಗಡಿ: ಇಳಂತಿಲ ಗ್ರಾಮದ ಪೆದಮಲೆಯಲ್ಲಿ ವಿದ್ಯುತ್ ಶಾಕ್ ಹೊಡೆದು ಕರಾಯ ಗ್ರಾಮದ ಸಗುಣ ಎಂಬವರು ಮೃತಪಟ್ಟ ಘಟನೆ ವರದಿಯಾಗಿದೆ.

ಮೃತರ ಪತ್ನಿ ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇಳಂತಿಲ ಗ್ರಾಮದ ಪೆದಮಲೆ ಎಂಬಲ್ಲಿ ಮನೆಯ ಕೆಲಸಕ್ಕೆ ತೆರಳಿ ಅವರ ಮನೆಯ ಸಮೀಪದ ಗುಡ್ಡದಲ್ಲಿ ಕೆಲಸ ಮಾಡುತ್ತಿದ್ದಾಗ ಪೊದೆಗಳ ನಡುವೆ ವಿದ್ಯುತ್ ತಂತಿಯೊಂದು ತುಂಡಾಗಿ ಬಿದ್ದಿರುವುದನ್ನು ಸ್ಪರ್ಶಿಸಿದ ಸಗುಣರವರು ವಿದ್ಯುತ್ ಪ್ರವಹಿಸಿ ಬಿದ್ದಿದ್ದಾರೆ.ಅವರನ್ನು ತಕ್ಷಣ ಚಿಕಿತ್ಸೆಗಾಗಿ ಪುತ್ತೂರು ಸರಕಾರಿ ಸಾರ್ವಜನಿಕ ಆಸ್ಪತ್ರೆಗೆ ಕರೆ ತಂದಾಗ ವೈದ್ಯರು ಸಗುಣರವರನ್ನು ಪರೀಕ್ಷಿಸಿದಾಗ ಆ ವೇಳೆಗಾಗಲೇ ಅವರು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!