ವಾಹನ ಚಾಲನೆ ಸಂದರ್ಭ ಸೆಲ್ಫಿ: ಸೇತುವೆ ಕೆಳಗೆ ಕಾರು ಬಿದ್ದು ಒಂದೇ ಕುಟುಂಬದ ಐವರು ಮೃತ್ಯು
ಸೇತುವೆಯಿಂದ ಕಾರೊಂದು ಬಿದ್ದ ಪರಿಣಾಮ ಒಂದೇ ಕುಟುಂಬದ ಐವರು ಮೃತಪಟ್ಟಿರುವ ಘಟನೆ ಜಾರ್ಖಂಡ್‌ನ ದಿಯೋಘರ್ ಜಿಲ್ಲೆಯಲ್ಲಿ ಅ.24 ರಂದು ನಡೆದಿರುವ ಬಗ್ಗೆ ವರದಿಯಾಗಿದೆ
ಅಸನ್ಸೋಲ್ ಸಂಕುಲ್ ಗ್ರಾಮದಿಂದ ಗಿರಿದಿಹ್ ಕಡೆಗೆ ಎಸ್ ಯುವಿ ಕಾರು ಬರುತ್ತಿದ್ದ ವೇಳೆ ಸೆಲ್ಫಿ ತೆಗೆದುಕೊಳ್ಳುವುದಕ್ಕಾಗಿ ಕುಟುಂಬದ ಸದಸ್ಯರೊಬ್ಬರು ವಾಹನವನ್ನು ಚಲಾಯಿಸಲು ಮುಂದಾಗಿದ್ದಾರೆ ಎನ್ನಲಾಗಿದೆ. ವಾಹನ ಚಲಾಯಿಸುವ ವೇಳೆ ಕುಟುಂಬದ ಸದಸ್ಯರು ಸೆಲ್ಫಿ ತೆಗೆದುಕೊಳ್ಳಲು ಮುಂದಾಗಿದ್ದಾಗ ಅನಾಹುತ ಸಂಭವಿಸಿದೆ ಎಂದು ಹೇಳಲಾಗಿದೆ.
ಸೆಲ್ಫಿ ತೆಗೆದುಕೊಳ್ಳುವ ವೇಳೆ ವಾಹನ ನಿಯಂತ್ರಣ ತಪ್ಪಿ ಸೇತುವೆಯಿಂದ ಬ್ಯಾರೇಜ್ ಗೆ ಬಿದ್ದಿದೆ. ಪರಿಣಾಮ ಒಂದೇ ಕುಟುಂಬದ ಐವರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ.