ಕರಾವಳಿಕ್ರೈಂ

ಮೆಲ್ಕಾರ್’ನಲ್ಲಿ ಚೂರಿ ಇರಿತ: ಮೂವರು ಆಸ್ಪತ್ರೆಗೆ ದಾಖಲುಬಂಟ್ವಾಳ: ಮೆಲ್ಕಾರ್ ನಲ್ಲಿ ಎರಡು ತಂಡಗಳ ನಡುವೆ ಕೆಲ ದಿನಗಳ ಹಿಂದೆ ನಡೆದ ಜಗಳ ಚೂರಿ ಇರಿತದ ಹಂತದವರೆಗೆ ಹೋಗಿದೆ. ಗುರುವಾರ ರಾತ್ರಿ 9ಗಂಟೆಗೆ ನಡೆದ ಘಟನೆಯಲ್ಲಿ ತಂಡಗಳ ನಡುವೆ ವೈಯಕ್ತಿಕ ಕಲಹದ ಮುಂದುವರಿದ ಭಾಗವಾಗಿ ಮೂವರ ಮೇಲೆ ಮತ್ತೊಂದು ತಂಡದ ಸದಸ್ಯರು ಇರಿದಿದ್ದಾಗಿ ಹೇಳಲಾಗಿದ್ದು, ಘಟನೆಯಿಂದ ಮೂವರು ಗಾಯಗೊಂಡಿದ್ದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೋಳಂಗಡಿ ನಿವಾಸಿಗಳಾದ ದೇವದಾಸ್, ಸಂದೀಪ್ ,ಶಂಕರ್ ಚೂರಿ ಇರಿತಕ್ಕೊಳಗಾದವರು.
ಬೋಳಂಗಡಿ ನಿವಾಸಿ ಶೋಧನ್, ಕಲ್ಲಡ್ಕ ನಿವಾಸಿ ಯತೀಶ್,ಮೆಲ್ಕಾರ್ ನಿವಾಸಿಗಳಾದ ಚೇತನ್,ಪ್ರಸನ್ನ,ಪ್ರದೀಪ್ ಮತ್ತು ಪ್ರಕಾಶ್ ಅವರ ತಂಡ ಸೇರಿಕೊಂಡು ಹಲ್ಲೆ ಮಾಡಿದ್ದಲ್ಲದೆ ಚೂರಿಯಿಂದ ಇರಿದಿದ್ದಾರೆ ಎಂದು ಅವರು ನಗರ ಪೋಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.


ಘಟನೆಗೆ ಕಾರಣವೇನು? ಬುಧವಾರ ರಾತ್ರಿ ಪಾಣೆಮಂಗಳೂರು ಶಾರದೋತ್ಸವ ಮೆರವಣಿಗೆ ವೇಳೆ ಎರಡು ತಂಡಗಳ ನಡುವೆ ನಡೆದ ಗಲಾಟೆ ಮುಂದುವರಿದ ಭಾಗವಾಗಿ ಗುರುವಾರ ರಾತ್ರಿ ಚೂರಿ ಇರಿತದವರೆಗೆ ಮುಂದುವರಿದಿದೆ.
ಕೆಲವರ್ಷಗಳ ಹಿಂದೆ ಜೊತೆಯಾಗಿ ಹುಲಿ ವೇಷ ಹಾಕಿ ಶಾರದ ವಿಸರ್ಜನೆ ಮೆರವಣಿಗೆಯಲ್ಲಿ ಹೆಜ್ಜೆಯಾಕುತ್ತಿದ್ದ ಯುವಕರ ತಂಡ ಯಾವುದೋ ವಿಚಾರಕ್ಕೆ ಇಬ್ಬಾಗವಾಗಿದ್ದು,ಇದೀಗ ಎರಡು ತಂಡಗಳಾಗಿ ಹುಲಿ ವೇಷವನ್ನು ಹಾಕಲಾಗುತ್ತದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಶಾರದ ವಿಸರ್ಜನೆ ವೇಳೆ ಮೆರವಣಿಗೆಯಲ್ಲಿ ಈ ಎರಡು ತಂಡಗಳ ನಡುವೆ ಗಲಾಟೆ ನಡೆದಿದ್ದು, ಮುಂದುವರಿದ ಭಾಗವಾಗಿ ನಿನ್ನೆ ಮೆಲ್ಕಾರ್ ಜಂಕ್ಷನ್ ಕಲ್ಲಿ ಒಂದು ತಂಡದ ಸದಸ್ಯರು ಬ್ಯಾನರ್ ತೆರವು ಮಾಡುತ್ತಿದ್ದ ವೇಳೆ ಇನ್ನೊಂದು ತಂಡ ಸ್ಥಳಕ್ಕೆ ಬಂದು ಹಲ್ಲೆ ನಡೆಸಿ,ಚೂರಿಯಿಂದ ಇರಿದು ಪರಾರಿಯಾಗಿದೆ.
ಘಟನೆಯಿಂದ ಗಾಯಗೊಂಡ ಮೂವರನ್ನು ಆರಂಭದಲ್ಲಿ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಓರ್ವನಿಗೆ ಗಂಭೀರ ಸ್ವರೂಪದ ಗಾಯವಾಗಿದ್ದರಿಂದ ಮೂವರನ್ನು ಮಂಗಳೂರು ಎ.ಜೆ.ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸ್ಥಳಕ್ಕೆ ಬಂಟ್ವಾಳ ನಗರ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!