ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮೇಲೆ ಮತ್ತೊಂದು ಎಫ್.ಐ.ಆರ್
ಬೆಳ್ತಂಗಡಿ: ಕಲೆಕ್ಷನ್ ಮಾಸ್ಟರ್ ಎಂದು ಸಿಎಂ ಸಿದ್ದರಾಮಯ್ಯ ಫೋಟೋ ಎಡಿಟ್ ಮಾಡಿ ವೈರಲ್ ಮಾಡಿದ್ದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಶೇಖರ್ ಕುಕ್ಕೆಡಿ ಎಂಬವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ.
ಸಿಎಂ ಕಚೇರಿ, ಗೃಹ ಕಚೇರಿ ಮತ್ತು ಸಿಎಂ ನಿವಾಸದ ಗೇಟ್ಗೆ ಕಲೆಕ್ಷನ್ ಮಾಸ್ಟರ್ ಎಂದು ಬೋರ್ಡ್ ಹಾಕಿರುವ ಫೋಟೋ ಎಡಿಟ್ ಮಾಡಿ ಶಾಸಕ ಹರೀಶ್ ಪೂಂಜ ಹೆಸರಿನ ಫೇಸ್ಬುಕ್ ಪೇಜ್ನಲ್ಲಿ ಪೋಸ್ಟ್ ಮಾಡಲಾಗಿತ್ತು.
ಇತ್ತೀಚೆಗೆ ಸರ್ಕಾರಿ ಅಧಿಕಾರಿಗಳಿಗೆ ಕರ್ತವ್ಯಕ್ತೆ ಅಡ್ಡಿಪಡಿಸಿ ಬೆದರಿಕೆ ಹಾಕಿದ್ದಾರೆ ಎನ್ನುವ ಆರೋಪದಲ್ಲಿ ಶಾಸಕ ಹರೀಶ್ ಪೂಂಜಾ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.