ವ್ಯಕ್ತಿಯೋರ್ವರು ಮೈಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುತ್ತಿಗಾರಿನಿಂದ ವರದಿಯಾಗಿದೆ.
ಗುತ್ತಿಗಾರಿನ ಆಚಳ್ಳಿಯ ಸಿರಿಯಾಕ್ ಮ್ಯಾಥ್ಯೂ ರವರ ಮಗ ಸೈಬಿನ್ ಆತ್ಮಹತ್ಯೆ ಮಾಡಿಕೊಂಡವರು. ಸ್ಥಳದಲ್ಲಿ ಸ್ಥಳೀಯರು ಜಮಾಯಿಸಿದ್ದು, ಪೋಲೀಸರು ಭೇಟಿ ನೀಡಿರುವುದಾಗಿ ತಿಳಿದು ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.