ಕಾಂಗ್ರೆಸ್ ಶಾಸಕರಿಗೆ ಡಿಕೆಶಿ ಎಚ್ಚರಿಕೆ
ಬೆಂಗಳೂರು: ಪಕ್ಷದ ಶಾಸಕರು ಯಾರೇ ಆದರೂ ಪಕ್ಷದ ಆಂತರಿಕ ವಿಚಾರ, ಸರ್ಕಾರ ಹಾಗೂ ಅಧಿಕಾರದ ಬಗ್ಗೆ ಮಾಧ್ಯಮಗಳ ಮುಂದೆ ಅನಗತ್ಯ ಹೇಳಿಕೆ ನೀಡಬಾರದು ಎಂದು ಮನವಿ ಹಾಗೂ ಎಚ್ಚರಿಕೆ ನೀಡುತ್ತೇನೆ. ಇಷ್ಟರ ನಂತರವೂ ಹೇಳಿಕೆ ನೀಡಿದರೆ ಅವರಿಗೆ ನೊಟೀಸ್ ನೀಡಬೇಕಾಗುತ್ತದೆ ಎಂದು ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.
ಸರಕಾರ ಬೀಳಿಸಲು ಬಿಜೆಪಿ ರೂಪಿಸುತ್ತಿರುವ ಷಡ್ಯಂತ್ರ ಸಫಲ ಆಗುವುದಿಲ್ಲ, ಇಂತಹ ಷಡ್ಯಂತ್ರದ ಬಗ್ಗೆ ನಮಗೆ ಗೊತ್ತಿದೆ. ಇದರ ಹಿಂದೆ ದೊಡ್ಡ ನಾಯಕರು ಕೂಡಾ ಇದ್ದಾರೆ. ಆದರೆ ಇದರಿಂದ ಏನೂ ಆಗುವುದಿಲ್ಲ ಎಂದು ಡಿಕೆಶಿ ತಿಳಿಸಿದರು.