ಪುತ್ತೂರು: SDPI ಸಮಾವೇಶ
ಪುತ್ತೂರು: ಎಸ್.ಡಿ.ಪಿ.ಐ ಪಕ್ಷದ ಸಮಾವೇಶ ಲಯನ್ಸ್ ಕ್ಲಬ್ ಹಾಲ್ ನಲ್ಲಿ ಅ.27ರಂದು ನಡೆಯಿತು.ವಿಧಾನ ಸಭಾ ಅಧ್ಯಕ್ಷರಾದ ಹಾಜಿ ಇಬ್ರಾಹಿಂ ಸಾಗರ್ ಅಧ್ಯಕ್ಷತೆ ವಹಿಸಿದ್ದರು.
ಎಸ್.ಡಿ.ಪಿ.ಐ ರಾಜ್ಯ ಸಮಿತಿ ಸದಸ್ಯರಾದ ಅಕ್ಬರ್ ಅಲಿ ಪೊನ್ನೋಡಿ ಆಗಮಿಸಿ ಪಕ್ಷದ ಮುಂದಿನ ಬೆಳವಣಿಗೆಯ ಬಗ್ಗೆ ಸೂಕ್ತ ಮಾರ್ಗದರ್ಶನ ನೀಡಿ ವಿಚಾರಗಳ ವಿನಿಮಯ ಮಾಡಿದರು.
ಎಸ್.ಡಿ.ಪಿ.ಐ ಜಿಲ್ಲಾ ಸಮಿತಿ ಕಾರ್ಯದರ್ಶಿ ಶಾಕಿರ್ ಅಳಕೆಮಜಲು ರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಎಸ್ ಡಿ ಪಿ ಐ ಜಿಲ್ಲಾ ಸದಸ್ಯರಾದ ಅಬೂಬಕ್ಕರ್ ಸಿದ್ದಿಕ್ ರವರು ಕ್ಯಾಡರ್ ಗಳಿಗೆ ಮಾರ್ಗದರ್ಶನ ನೀಡಿದರು.
ವೇದಿಕೆಯಲ್ಲಿ ಎಸ್.ಡಿ.ಪಿ.ಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ಉಪಾಧ್ಯಕ್ಷರಾದ ಹಮೀದ್ ಸಾಲ್ಮರ, ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಪುರುಷರಕಟ್ಟೆ, ಜೊತೆ ಕಾರ್ಯದರ್ಶಿಗಳಾದ ಮುಸ್ತಫಾ ಮತ್ತು ಅದ್ದು ಕೊಡಿಪ್ಪಾಡಿ, ಸಂಘಟನಾ ಕಾರ್ಯದರ್ಶಿ ಉಸ್ಮಾನ್ ಎ.ಕೆ, ಎಸ್.ಡಿ.ಪಿ.ಐ ನಗರ ಅಧ್ಯಕ್ಷರಾದ ಸಿರಾಜ್ ಕೂರ್ನಡ್ಕ, ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ಸದಸ್ಯರಾದ ಅಡ್ವೊಕೇಟ್ ಅಬ್ದುಲ್ ರಹಿಮಾನ್, ಹಿರಿಯಾರಾದ ಪಿ ಬಿ ಕೆ ಮೊಹಮ್ಮದ್, ಅಶ್ರಫ್ ಬಾವು, ವಿಮೆನ್ ಇಂಡಿಯಾ ಮೂವ್ಮೆಂಟ್ ಅಧ್ಯಕ್ಷೆ ಝಾಹಿದ ಸಾಗರ್, ನಗರಸಭಾ ಸದಸ್ಯರಾದ ಝುಹರ ಉಪಸ್ಥಿತರಿದ್ದರು.
ಎಸ್ ಡಿ ಟಿ ಯು ಕಾರ್ಯದರ್ಶಿ ಇಫಾಜ್ ಬನ್ನೂರು ಮತ್ತು ಕಬಕ, ನರಿಮೊಗರು, ಪುಣಚ, ವಿಟ್ಲ, ಕುಂಬ್ರ ಬ್ಲಾಕಿನ ಅಧ್ಯಕ್ಷರುಗಳು, ಕಾರ್ಯದರ್ಶಿಗಳು ಹಾಗೂ ಎಸ್.ಡಿ.ಪಿ.ಐ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು. ಜೊತೆ ಕಾರ್ಯದರ್ಶಿ ಮುಸ್ತಫಾ ಡಿ.ಬಿ ವಂದಿಸಿದರು. ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.