ಕರಾವಳಿಕ್ರೈಂ

ಪುತ್ತೂರು: ಬಸ್’ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಬಾಲಕಿಗೆ ಲೈಂಗಿಕ ಕಿರುಕುಳ: ವ್ಯಕ್ತಿಯ ಬಂಧನ



ಪುತ್ತೂರು: ಬಸ್ಸೊಂದರಲ್ಲಿ ಪ್ರಯಾಣಿಸುತ್ತಿದ್ದ ಬಾಲಕಿಗೆ ವ್ಯಕ್ತಿಯೋರ್ವ ಲೈಂಗಿಕ ಕಿರುಕುಳ ನೀಡಿದ ಘಟನೆ ಶನಿವಾರ ನಡೆದಿದ್ದು, ಆರೋಪಿಯನ್ನು ಪುತ್ತೂರು ಮಹಿಳಾ ಠಾಣೆಯ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಉದಯ ಎಡಪದವು ಬಂಧಿತ ಆರೋಪಿ. ಮಾಣಿಯಿಂದ ಪುತ್ತೂರು ಕಡೆಗೆ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಹೋಗುತ್ತಿದ್ದ ಬಾಲಕಿಗೆ ಉದಯ ಎಡಪದವು ಎಂಬಾತ ಲೈಂಗಿಕ ಕಿರುಕುಳ ನೀಡಿದ್ದಾಗಿ ಆರೋಪಿಸಲಾಗಿದೆ. ಈ ವಿಚಾರವನ್ನು ಆಕೆ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ತಿಳಿಸಿದ್ದ ಹಿನ್ನಲೆಯಲ್ಲಿ ಪ್ರಯಾಣಿಕರು ಆತನನ್ನು ನಡು ಮಾರ್ಗದಲ್ಲಿ ಇಳಿಯಲು ಬಿಡದೆ ತಡೆದಿದ್ದರು ಎನ್ನಲಾಗಿದೆ. ಪೊಲೀಸರು ಆರೋಪಿಯನ್ನು ಬಸ್ಸಿನಿಂದಲೇ ವಶಕ್ಕೆ ಪಡೆದುಕೊಂಡರೆಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!